Anna Bhagya Scheme : ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನಗದು ನೀಡಲಿದೆ ಕರ್ನಾಟಕ ಸರಕಾರ

ಬೆಂಗಳೂರು : (Anna Bhagya Scheme) ಕಾಂಗ್ರೆಸ್‌ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು, ಒಂದೊಂದಾಗಿ ಜಾರಿ ಮಾಡುತ್ತಿದೆ. ಇನ್ನು ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ಸಾಕಷ್ಟು ಅಕ್ಕಿ ಕರ್ನಾಟಕದಲ್ಲಿ ಪೂರೈಕೆ ಇಲ್ಲದಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟ ಮಹತ್ವದ ನಿರ್ಧಾಎ ಕೈಗೊಂಡಿದೆ.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು. ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಇನ್ನು ಸಚಿವ ರಾದ ಎಚ್‌.ಕೆ. ಪಾಟೀಲ್‌ ಹಾಗೂ ಕೆ.ಎಚ್‌. ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ದಾರರಿಗೆ ಐದು ಕೆಜಿ ಅಕ್ಕಿ ಹಾಗೂ ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಿಗೆ ಹಣ ನೀಡಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ : BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಾರಾ ಬಿ.ವೈ.ವಿಜಯೇಂದ್ರ : ಹೈಕಮಾಂಡ್‌ ಲೆಕ್ಕಾಚಾರವೇನು ?

ಇದನ್ನೂ ಓದಿ : Vidhan sabha MLA Training‌ : ನೂತನ ಶಾಸಕರಿಗೆ ಇಂದಿನಿಂದ ತರಬೇತಿ ಶಿಬಿರ

ಸದ್ಯ ಕಾಂಗ್ರೆಸ್‌ ಸರಕಾರ ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದ್ದು, ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಮಾಸಿಕ ತಲಾ 170 ರೂ. ನೀಡಲಾಗುತ್ತದೆ ಎಂದು ಹೇಳಲಾಗಿದೆ. ಸದ್ಯ ಈ ಪ್ರಕ್ರಿಯೆ ಜುಲೈ ತಿಂಗಳಿಂದಲೇ ಪಡಿತರದಾರರ ಖಾತಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ಹೇಳಿದರು. ಆದರೆ ಐದು ಕೆಜಿ ಅಕ್ಕಿಯ ಹಣವನ್ನು ಪಡಿತರಿಗೆ ಹೇಗೆ ನೀಡಲಾಗುತ್ತದೆ. ಇದಕ್ಕೆ ಸರಕಾರ ಯಾವ ರೀತಿ ಕ್ರಮವನ್ನು ತೆಗೆದುಕೊಳ್ಳಬಹುದು ಎನ್ನುವುದನ್ನು ಕಾದುನೋಡಬೇಕಿದೆ.

Anna Bhagya Scheme: Karnataka government will give cash instead of rice under Anna Bhagya scheme

Comments are closed.