ಬೆಂಗಳೂರು : ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು, ಒಂದೊಂದಾಗಿ ಜಾರಿ ಮಾಡಲು ಶುರು ಮಾಡಿದೆ. ಕರ್ನಾಟಕ ಸರಕಾರವು ಹೆಚ್ಚಿನ ಪ್ರಮಾಣದ ಅಕ್ಕಿ ಪೂರೈಕೆಯಲ್ಲಿ ತೊಂದರೆಯನ್ನು ಎದುರಿಸುತ್ತಿದ್ದು, ‘ಅನ್ನ ಭಾಗ್ಯ’ ಯೋಜನೆಯಡಿ (Anna Bhagya Scheme) ಭರವಸೆ ನೀಡಿದಂತೆ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ನೀಡುವ ಬದಲು ಪ್ರತಿ ಕಿಲೋಗೆ 34 ರೂ ದರದಲ್ಲಿ ನಗದು ನೀಡಲು ನಿರ್ಧರಿಸಿದೆ. ಹೀಗಾಗಿ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ನಾಳೆಯಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ರಾಜ್ಯ ಸರಕಾರ ಅಕ್ಕಿ ಖರೀದಿಸುವವರೆಗೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿ (ಕೆಜಿಗೆ 34 ರೂ.) ಬದಲಿಗೆ 170 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಜನರು ಅನ್ನವನ್ನು ತಿನ್ನುವುದಿಲ್ಲ. ದಕ್ಷಿಣ ಭಾಗದ ಜನರಿಗೆ ರಾಗಿ ನೀಡುತ್ತೇವೆ. ಉತ್ತರ ಕರ್ನಾಟಕದವರಿಗೆ ಕಾಳು ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ, ದಾಸ್ತಾನು ಮಾಡಿದ ನಂತರ ಧಾನ್ಯಗಳನ್ನು ವಿತರಿಸುತ್ತೇವೆ. MSP ಮೂಲಕ ಧಾನ್ಯ ಖರೀದಿಸುತ್ತೇವೆ. ಎರಡು ಕೆಜಿ, ಜೋಳ ಅಥವಾ ರಾಗಿ ಮತ್ತು ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾಳೆಯಿಂದಲೇ ಜಾರಿಯಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ : Bangalore Mysore Expressway : ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ 2 ಕಡೆ ಟೋಲ್ ಆರಂಭ : ಪ್ರಯಾಣಿಕರಿಗೆ ಮತ್ತೆ ಬರೆ
ಇದನ್ನೂ ಓದಿ : Karnataka SSLC Supplementary Result 2023 : ಇಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಫಲಿತಾಂಶ ಪ್ರಕಟ
ಕೇಂದ್ರ ಸರಕಾರ ಮನಸ್ಸು ಬದಲಾಯಿಸಿ ಅಕ್ಕಿ ನೀಡಿದರೆ ಅಕ್ಕಿ ವಿತರಿಸುತ್ತೇವೆ. ಇಲ್ಲವೇ ಟೆಂಡರ್ ಕರೆದು ಅಕ್ಕಿ ಖರೀದಿಸುತ್ತೇವೆ ಎಂದಿದ್ದಾರೆ. ಅಕ್ಕಿ ಖರೀದಿಗೆ ಹಣ ಸಿದ್ಧವಾಗಿದ್ದು, ಖಾತೆಗೆ ವರ್ಗಾಯಿಸಲಾಗುತ್ತದೆ. ನಾಳೆಯಿಂದಲೇ ಖಾತೆಗೆ ಹಣ ಜಮಾ ಮಾಡುತ್ತೇವೆ. ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಸಮಾವೇಶದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Anna Bhagya Scheme: money will transferred to account from tomorrow