ಗೋ ಹತ್ಯಾ ವಿಧೇಯಕ ಅಂಗೀಕಾರ : ಗುಜರಾತ್, ಉತ್ತರ ಪ್ರದೇಶ ಮಾದರಿಯಲ್ಲಿ ಶಿಕ್ಷೆ

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿಂದು ಕರ್ನಾ ಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ. ಈ ನಡುವಲ್ಲೇ ಕಾಂಗ್ರೆಸ್ ನಾಳಿನ ಕಲಾಪವನ್ನು ಬಹಿಷ್ಕರಿಸಿದೆ.

ವಿಧಾನಸಭೆಯಲ್ಲಿಂದು ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡನೆ ಆರಂಭಿಸುತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅದ್ರಲ್ಲೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸದನ ಸಲಹಾ ಸಮಿತಿಯಲ್ಲಿ ಹೊಸ ವಿಧೆಯಕ ಮಂಡನೆ ಮಾಡಬಾರದು. ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿರುವ ವಿಧೇಯಕ ಗಳನ್ನು ಮಾತ್ರ ಮಂಡಿಸಬೇಕು ಎಂದು ತೀರ್ಮಾನಿಸಲಾಗಿದೆ. ಈಗ ಏಕಾಏಕಿ ಹೊಸ ಬಿಲ್ ಮಂಡಿಸುತ್ತಿದ್ದಾರೆ. ನಾವು ಇದನ್ನು ಒಪ್ಪುವುದಿಲ್ಲ ಎನ್ನುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ ಜೆಡಿಎಸ್ ಸದಸ್ಯರು ಕೂಡ ವಿದೇಯಕ ಮಂಡನೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಕಾಗೇರಿ ಕೂಡ ನಿನ್ನೆ ಮಹತ್ವದ ಬಿಲ್ ಮಂಡನೆ ಮಾಡಬಹುದು ಎಂದು ಚರ್ಚೆಯಾಗಿತ್ತು. ಹೀಗಾಗಿ ಇದನ್ನು ಮಂಡನೆಗೆ ಅವಕಾಶ ಕೊಟ್ಟಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ನಡೆಯಿತು ಸಭೆಯಲ್ಲಿ ಗದ್ದಲದ ವಾತಾವರಣ ಏರ್ಪಟ್ಟಿತು. ಗದ್ದಲದ ನಡುವೆಯೇ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು. ವಿಧೇಯಕ ಮಂಡನೆ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿಯವರೂ ದನ ಕಡಿಯುವ ಕಾಂಗ್ರೆಸ್‍ನವರಿಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು.

ಸದನದಲ್ಲಿ ಗದ್ದಲ ಗೊಂದಲದ ನಡುವೆಯೇ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಗಳ ಮತ್ತು ಕೆಲವು ಇತರೆ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ವಿಧೇಯಕವನ್ನು ಮಂಡಿಸಿದರು. ಹಾಗೂ ವಿಧೇಯಕದ ಬಗ್ಗೆ ವಿವರಣೆ ನೀಡಿದರು. ಸದನದಲ್ಲಿ ಯಾವೊಬ್ಬ ಶಾಸಕರೂ ವಿಧೇಯಕದ ಬಗ್ಗೆ ಚೆರ್ಚೆ ನಡೆಸದ ಹಿನ್ನಲೆಯಲ್ಲಿ ಸ್ಪೀಕರ್ ಧ್ವನಿಮತದ ಮೂಲಕ ವಿಧೇಯಕ ಪರ್ಯಾಲೋಚನೆ ಪ್ರಸ್ತಾವನೆ ಮಂಡಿಸಿ ಅನುಮೋದನೆ ನೀಡಿದರು.

Comments are closed.