Anti Conversion Bill : ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ಫೈಟ್

ಬೆಂಗಳೂರು: (Anti Conversion Bill Today ) ಈ ಬಾರಿಯ ವಿಧಾನ ಮಂಡಲನದ ಅಧಿವೇಶನ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವಿನ ಮತ್ತೊಂದು ಕದನಕ್ಕೆ ಅಖಾಡ ಸಿದ್ಧವಾಗಿದೆ. ಈಗಾಗಲೇ ವಿಧಾನಸಭೆಯಲ್ಲಿ ಮಳೆ ಹಾನಿ ಕುರಿತ ಚರ್ಚೆಯಲ್ಲಿ ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ವಾಕ್ಸಮರ ನಡೀತಿದೆ. ಮತ್ತೊಂದೆಡೆ ಪರಿಷತ್ ನಲ್ಲಿ ಇಂದು ಮತಾಂತರ ನಿಷೇಧ ಕದನಕ್ಕೆ ವೇದಿಕೆ ಸಿದ್ಧವಾಗಿದೆ.

ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಂಡನೆಗೆ ಪೂರ್ವಭಾವಿಯಾಗಿ ಬುಧವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯಲ್ಲಿ ಪರಿಷತ್​ನ ಬಿಜೆಪಿ ಸದಸ್ಯರ ಸಭೆ ನಡೆದಿದೆ. ಸಭೆಯಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ವಿಧಾನ ಪರಿಷತ್​ನಲ್ಲಿ ಇಂದು ಪ್ರಶೋತ್ತರ ಕಲಾಪ ನಂತರ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಲಿದ್ದಾರೆ.

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಪ್ರಸ್ತುತ ವಿಧಾನ ಪರಿಷತ್​ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್​ನ 26 ಮತ್ತು ಜೆಡಿಎಸ್​ನ 8 ಸದಸ್ಯರಿದ್ದಾರೆ. ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಿರುವುದರಿಂದ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುವ ಉತ್ಸಾಹ ಬಿಜೆಪಿಗೆ ಬಂದಿದೆ.

ಏನಿದು ಮತಾಂತರ ನಿಷೇಧ ಕಾಯ್ದೆ (Anti Conversion Bill)..?

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡಬೇಕು

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿರಬೇಕು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ನೀಡಬೇಕು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸಬೇಕು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸಬೇಕು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡಬೇಕು

8) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸಬೇಕು.

ಇದನ್ನೂ ಓದಿ : WhatsApp Account Hacked : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವಾಟ್ಸಪ್ ಅಕೌಂಟ್ ಹ್ಯಾಕ್ ಮಾಡಿದ ಸೈಬರ್ ಕ್ರಿಮಿನಲ್ಸ್

ಇದನ್ನೂ ಓದಿ : man’s nose ear chopped off :ಮಗಳಿಗೆ ಮರು ಮದುವೆ ಮಾಡಿದ ತಂದೆಯ ಮೂಗು, ಕಿವಿಯನ್ನೇ ಕತ್ತರಿಸಿದ ದುಷ್ಕರ್ಮಿಗಳು

Anti Conversion Bill today anti conversion bill tabled in Karnataka legislative council

Comments are closed.