ಬೆಂಗಳೂರು : ರಾಜ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B. S. Yediyurappa) ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ವೈ ಅವರಿಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ. ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದು, ನಾಳಿನ ಘಟಿಕೋತ್ಸವದಲ್ಲಿ ರಧಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Gruha Lakshmi Scheme : ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : Former CM Bommai : ವಿಧಾನಸಭೆಯಿಂದ ಬಿಜೆಪಿ ಶಾಸಕರ ಅಮಾನತು : ಕಾಂಗ್ರೆಸ್ ಸರಕಾರದ ಸರ್ವಾಧಿಕಾರ ಎಂದ ಮಾಜಿ ಸಿಎಂ ಬೊಮ್ಮಾಯಿ
ಬಿ.ಎಸ್ ಯಡಿಯೂರಪ್ಪ ಕರ್ನಾಟಕದ 19ನೇ ಮುಖ್ಯಮಂತ್ರಿ ಹಾಗು ಭಾರತೀಯ ಜನತಾ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ. ಇವರು ಕರ್ನಾಟಕ ವಿಧಾನಸಭೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2008ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ, ಎಸ್. ಬಂಗಾರಪ್ಪನವರನ್ನು ಸುಮಾರು 46 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ, ವಿಧಾನಸಭೆಯನ್ನು ಪ್ರವೇಶಿಸುವುದರ ಜೊತೆಗೆ ಬಿಜೆಪಿಗೆ ರಾಜ್ಯಾದ್ಯಂತ ಜಯ ತಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
B. S. Yediyurappa : Former Chief Minister B. S. Yediyurappa was awarded an honorary doctorate by Krishi University.