congress ask five questions to amit shah : ರಾಜ್ಯದಲ್ಲಿ ಒಂದು ದಿನದ ಪ್ರವಾಸ ಕೈಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ತೆರಳಿದ್ದಾರೆ. ಅಮಿತ್ ಶಾ ಬಿಜೆಪಿ ನಾಯಕರ ಜೊತೆ ಸಭೆ ಕರೆಯುತ್ತಾರೆ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ, ಚುನಾವಣಾ ರಣತಂತ್ರ ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ ಎಂದೆಲ್ಲ ಭಾವಿಸಲಾಗಿತ್ತು. ಆದರೆ ಅಚ್ಚರಿಯ ನಡೆ ಎಂಬಂತೆ ಅಮಿತ್ ಶಾ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆಯಬೇಕಿದ್ದ ಸಭೆಯನ್ನೇ ರದ್ದು ಮಾಡಿ ಎಲ್ಲರ ಹುಬ್ಬೇರಿಸಿದರು.
ಸಿಎಂ ನಿವಾಸದಲ್ಲಿ ಭೋಜನದಲ್ಲಿ ಭಾಗಿಯಾದ ಅಮಿತ್ ಶಾ ಇಲ್ಲಿಯೇ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಬಸವರಾಜ ಹೊರಟ್ಟಿ ಅಮಿತ್ ಶಾರನ್ನು ಭೇಟಿಯಾಗುವ ಮೂಲಕ ಬಿಜೆಪಿ ಸೇರ್ಪಡೆಯ ಗುಸು ಗುಸು ಹರಡುವಂತೆ ಮಾಡಿದ್ದೊಂದನ್ನು ಬಿಟ್ಟರೆ ಮಿಕ್ಯಾವ ಖಾಸ್ ಬಾತ್ ಕಾಣಲಿಲ್ಲ. ಬಿಜೆಪಿ ಚಾಣಕ್ಯ ರಾಜ್ಯ ಪ್ರವಾಸ ಮುಗಿಸುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಅಮಿತ್ ಶಾರ ರಾಜ್ಯ ಪ್ರವಾಸದ ಅಜೆಂಡಾವನ್ನು ಕೆಣಕಿ ಟ್ವೀಟ್ ಮಾಡಿದೆ.
ಅಮಿತ್ ಶಾ ಅವರೇ, ನಿಮ್ಮ ಕರ್ನಾಟಕ ಭೇಟಿಯ ಅಜೆಂಡಾ ಏನು? ಪಿಎಸ್ಐ ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ? ಬಿಟ್ ಕಾಯಿನ್ ಹಗರಣದ ತನಿಖೆಯನ್ನ ಚುರುಕುಗೊಳಿಸುವುದಕ್ಕಾ? ಕುಸಿದು ಕುಳಿತಿರುವ ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸುವುದಕ್ಕಾ? ಅಸಮರ್ಥ ಗೃಹಮಂತ್ರಿಯನ್ನು ಬದಲಿಸುವುದಕ್ಕಾ? ಅಥವಾ ಸಿಎಂ ಬದಲಾವಣೆಗಾಗಿಯಾ? ಕೇಂದ್ರ ಗೃಹಸಚಿವರ ರಾಜ್ಯದ ಭೇಟಿ ಕೆಟ್ಟು ನಿಂತ ಡಬಲ್ ಇಂಜಿನ್ ಸರ್ಕಾರವನ್ನು ತಳ್ಳಿ ಸ್ಟಾರ್ಟ್ ಮಾಡುವುದಕ್ಕಲ್ಲ, ಬದಲಾಗಿ ಜೆ.ಪಿ ನಡ್ಡಾ ಅವರನ್ನು ಸೈಡ್ ಲೈನ್ ಮಾಡುವುದಕ್ಕೆ.ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಆಗು ಹೋಗುಗಳನ್ನು ಚರ್ಚಿಸುವ ಬದಲು ಪಕ್ಷದ ಸಭೆ ಮಾಡುತ್ತಿದ್ದಾರೆ. ಅವರ ಭೇಟಿಯಿಂದ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಅವರ ಮುನ್ಸೂಚನೆ ನಿಜವೇ? ನಿಜವಲ್ಲ ಎಂದಾದರೆ, ಇತರ ಪಕ್ಷಗಳ ನಾಯಕರಿಗೆ ನೋಟಿಸ್ ಸಲಹೆ ಕೊಡುವ ತಾವು ಯತ್ನಾಳ್ ಅವರಿಗೆ ನೋಟಿಸ್ ಏಕೆ ನೀಡಿಲ್ಲ? ಬಿಜೆಪಿ ನಾಯಕತ್ವವಿಲ್ಲದೇ ಒದ್ದಾಡುವ ಸ್ಥಿತಿ ಬಂದಿದೆ. ಅದೆಷ್ಟೇ ಬದಲಾವಣೆಯ ಸರ್ಕಸ್ ಮಾಡಿದರೂ ನಾಯಕತ್ವ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದೆ.
ಇದನ್ನು ಓದಿ : Amit Shah ಆಗಮನದ ಹೊತ್ತಲ್ಲೇ ಅಶ್ವತ್ಥ ನಾರಾಯಣ್ ಗೆ ಶಾಕ್ : ಭ್ರಷ್ಟಾಚಾರದ ಆರೋಪ ಕೆಂಡಾಮಂಡಲ
ಇದನ್ನೂ ಓದಿ : BJP Secret Meeting : ಸಿಎಂ ಬೊಮ್ಮಾಯಿ ಬದಲಾವಣೆ ? ಕುತೂಹಲ ಮೂಡಿಸಿದೆ ಬಿಜೆಪಿ ತ್ರಿಮೂರ್ತಿಗಳ ಸಭೆ
bangaluru urban congress ask five questions to amit shah