Karnataka NEW CM : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದ್ದಾರೆ. ಸಿಎಂ ಆಗಿ ಪದಗ್ರಹಣ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇರಲಿಲ್ಲ. ಹೈಕಮಾಂಡ್‌ ನಾಯಕರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ಸಂಪುಟ ರಚನೆ ಮಾಡುತ್ತೇನೆ ಎಂದಿದ್ದಾರೆ.

ಪ್ರತಿಜ್ಞಾ ವಿಧಿ ಸಮಾರಂಭಕ್ಕೂ ಮುನ್ನ ಬಾಲಬ್ರೂಯಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆಯನ್ನ ಸಲ್ಲಸಿದ್ದಾರೆ. ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರು ಅಧಿಕಾರ ಸ್ವೀಕಾರ ಮಾಡಿದ್ದು, ಇನ್ನೊಂದು ವಾರದಲ್ಲಿ ಹೊಸ ಸಂಪುಟ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಯಿದೆ. ಅಲ್ಲದೇ ಬಸವರಾಜ್‌ ಬೊಮ್ಮಾಯಿ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಹೈಕಮಾಂಡ್‌ ನಾಯಕರ ಜೊತೆಗೆ ಸಂಪುಟ ರಚನೆಯ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

Comments are closed.