ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದ ಕುತೂಹಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ ಬೀಳಲಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತ.
ಸಿಎಂ ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾರಾಗುತ್ತಾರೆ ಅನ್ನೋ ಕುತೂಹಲ ವ್ಯಕ್ತವಾಗಿತ್ತು. ಮಾತ್ರವಲ್ಲ ಹಲವು ಹೆಸರಗಳು ಕೂಡ ಕೇಳಿಬಂದಿತ್ತು. ಆದ್ರೆ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : Bommai CM : ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನೇಮಕ : ನಾಳೆ ಪ್ರಮಾಣವಚನ
ನೂತನ ಮುಖ್ಯಮಂತ್ರಿಯ ಆಯ್ಕೆಯ ಕುರಿತು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಚುನಾವಣಾ ವೀಕ್ಷಕರಾದ ರಾಕೇಶ್ ರೆಡ್ಡಿ, ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.