LIVE : ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಪ್ರಮಾಣ ವಚನ ನೇರಪ್ರಸಾರ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ ರಾಜ್ಯಪಾಲ ತಾವರ್‌ಚಂದ್‌ ಗೆಹಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಈ ಮೂಲಕ ಬೊಮ್ಮಾಯಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಳೆದ ಎರಡು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಖುದ್ದು ಬಿ.ಎಸ್.ಯಡಿಯೂರಪ್ಪ ಅವರೇ ಪ್ರಸ್ತಾಪ ಮಾಡಿದ್ದರು. ಶಾಸಕಾಂಗ ಸಭೆ ಹಾಗೂ ಬಿಜೆಪಿ ಹೈಕಮಾಂಡ್‌ ಕೂಡ ಬಸವರಾಜ್‌ ಬೊಮ್ಮಾಯಿ ಅವರಿಗೆ ಸಿಎಂ ಹುದ್ದೆ ನೀಡಲು ಸಮ್ಮತಿಯನ್ನು ನೀಡಿದೆ.

ಜನತಾದಳದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಬಸವರಾಜ್‌ ಬೊಮ್ಮಾಯಿ ನಂತರದಲ್ಲಿ ಬಿಜೆಪಿಯನ್ನು ಸೇರಿ ಮೂರು ಬಾರಿ ಶಿಗ್ಗಾವ್‌ ವಿಧಾನಸಭಾ ಕ್ಷೇತ್ರದಿಂದ ಶಾಸಕ ರಾಗಿ ಆರಿಸಿ ಬಂದಿದ್ದರು. ಈ ಹಿಂದೆ ಜಲಸಂಪನ್ಮೂಲ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದ, ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಆರ್.‌ಬೊಮ್ಮಾಯಿ ಅವರ ಮಗನಾಗಿರುವ ಬಸವರಾಜ್‌ ಬೊಮ್ಮಾಯಿ ರಾಜಕೀಯದಲ್ಲಿ ಅಪಾರ ಜ್ಞಾನವನ್ನು ಹೊಂದಿದ್ದಾರೆ.

ಇದನ್ನೂ ಓದಿ : ಅಂದು ಮೆಕ್ಯಾನಿಕಲ್‌ ಇಂಜಿನಿಯರ್‌ : ಇಂದು ರಾಜ್ಯದ ಮುಖ್ಯಮಂತ್ರಿ

ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಮಾತ್ರವೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಉಳಿದ ಸಚಿವರು ನಂತರದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭದಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಸೇರಿದಂತೆ ವಿರೋಧ ಪಕ್ಷದ ಮುಖಂಡರು, ಶಾಸಕರು ಭಾಗಿಯಾಗಲಿದ್ದಾರೆ.

Comments are closed.