ಬೆಂಗಳೂರು : basavaraj bommai: ರಾಜ್ಯದಲ್ಲಿ ನಡೆದಿರುವ ಪಿಎಸ್ಐ ನೇಮಕಾತಿ ಅಕ್ರಮವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಬಗೆದಷ್ಟೂ ಮಾಹಿತಿಗಳು ದೊರೆಯುತ್ತಲೇ ಇದೆ. ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ರಿಲೀಸ್ ಮಾಡಿರುವ ಆಡಿಯೋ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಯಿಸಿದರು. ಆರ್,ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ನಾವು ತನಿಖೆ ನಡೆಸುತ್ತೇವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋವನ್ನು ನಾನು ಕೇಳಿಸಿಕೊಂಡಿಲ್ಲ. ಆಡಿಯೋದಲ್ಲಿ ಇಬ್ಬರ ನಡುವಿನ ಸಂಭಾಷಣೆಯ ಬಗ್ಗೆ ತನಿಖೆ ನಡೆಸಲಾಗುತ್ತದೆ. ಆಡಿಯೋದಲ್ಲಿರುವ ಆ ಇಬ್ಬರು ಯಾರು..? ಅವರ ಉದ್ದೇಶವೇನಾಗಿತ್ತು..? ಹೀಗೆ ಎಲ್ಲದರ ಬಗ್ಗೆ ತನಿಖೆ ನಡೆಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದೇ ವೇಳೆ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದ ಹುಸಿ ಬಾಂಬ್ ಕರೆ ವಿಚಾರವಾಗಿಯೂ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ ಕದಡಲು ಈ ರೀತಿಯ ಅನೇಕ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಮೇಲ್ನೋಟಕ್ಕೆ ಇದು ಪಾಕಿಸ್ತಾನದಿಂದ ಬಂದ ಇ ಮೇಲ್ನಂತಿದೆ. ಆದರೆ ಈ ವಿಚಾರದ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಕಮಿಷನರ್ ಜೊತೆಯಲ್ಲಿ ಈ ವಿಚಾರವಾಗಿ ಮಾತನಾಡುತ್ತೇನೆ. ಇ ಮೇಲ್ ಯಾವ ದೇಶದಿಂದ ಬಂದಿದೆ ಎಂಬುದನ್ನು ಶೀಘ್ರದಲ್ಲಿಯೇ ತಿಳಿದುಕೊಳ್ಳಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಬೆನ್ನಲ್ಲೇ 402 ಪಿಎಸ್ಐ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯಲ್ಲಿಯೂ ಅಕ್ರಮ ಎಸಗಿ ಹುದ್ದೆಗೆ ನೇಮಕಗೊಳ್ಳುವ ಬಗ್ಗೆ ಇಬ್ಬರು ಅನಾಮಧೇಯ ವ್ಯಕ್ತಿಗಳು ಮಾತನಾಡಿಕೊಂಡಿರುವ ಆಡಿಯೋವನ್ನು ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದರು.
ಇದನ್ನು ಓದಿ : Shivamogga Airport ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿಮಾನ ನಿಲ್ದಾಣ 2023 ರಿಂದ ಆರಂಭ
ಇದನ್ನೂ ಓದಿ : JDS: 2023 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಎಲ್ಲವೂ ಸುಲಭವಿಲ್ಲ: ಆಮ್ ಆದ್ಮಿ, ಎನ್‌ಸಿಪಿ ಸ್ಪರ್ಧೆಗೆ ಇಳಿಯಲಿದೆ
basavaraj bommai says investigate about audio over psi scam