Karnataka CM : ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಇದೀಗ ನೂತನ ಸಿಎಂ ಪದಗ್ರಹಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬೆಳಗ್ಗೆ11 ಗಂಟೆಗೆ ಬೊಮ್ಮಾಯಿ ಅವರು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಘೋಷಣೆಯಾಗುತ್ತಿದ್ದಂತೆಯೇ ರಾಜಭವನಕ್ಕೆ ತೆರಳಿ ತಮ್ಮ ಹಕ್ಕು ಮಂಡನೆಯ ಪತ್ರವನ್ನು ಮಂಡಿಸಿದ್ದಾರೆ. ರಾಜ್ಯಪಾಲರು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆಯಿಟ್ಟು ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ. ಅದಕ್ಕಾಗಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಬಸವರಾಜ್‌ ಬೊಮ್ಮಾಯಿ ಒಬ್ಬರೇ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದೇನೆ. ನನ್ನ ರಾಜಕೀಯ ಗುರು ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿಯೇ ಮುನ್ನಡೆ ಯುತ್ತೇನೆ.

Comments are closed.