ಕರ್ನಾಟಕ ವಿಧಾನಸಭೆ ಚುನಾವಣೆ 2023 : ನಾಳೆ ಏಪ್ರಿಲ್ 29 ರಿಂದ ಮತದಾನ ಆರಂಭ

ಬೆಂಗಳೂರು : ರಾಜ್ಯದಾದ್ಯಂತ ವಿಧಾನ ಸಬೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತ ಭೇಟೆಗಾಗಿ ಪಣ ತೊಟ್ಟು ನಿಂತಿದ್ದಾರೆ. ಇದೀಗ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (BBMP Chief Commissioner Tushar Girinath) ಮಾತನಾಡಿ, 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಅಗತ್ಯವುಳ್ಳವರಿಗೆ ಮನೆಯಿಂದ ಏಪ್ರಿಲ್ 29 ರಿಂದ ಮೇ 6 ರವರೆಗೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ನಾಳೆ ಏಪ್ರಿಲ್ 29 ರಿಂದ ಮತದಾನ ಆರಂಭಗೊಳ್ಳಲಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರದಲ್ಲಿ 97,15,109 ಮತದಾರರಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 97,15,109 ಮತದಾರರಿದ್ದು, 50,24,775 ಪುರುಷರು, 46,86,813 ಮಹಿಳೆಯರು, 1,761 ಇತರೆ, 1,760 ಸೇವಾ ಮತದಾರರಿದ್ದಾರೆ. ನಗರದಲ್ಲಿ 1,43,526 ಯುವ ಮತದಾರರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಿದೆ ಎಂದರು. 80 ವರ್ಷ ಮೇಲ್ಪಟ್ಟ ಮತದಾರರು ಹಾಗೂ ವಿಶೇಷಚೇತನರಿಗೆ ಏಪ್ರಿಲ್ 29ರಿಂದ ಮೇ 6ರವರೆಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾಧಿಕಾರಿಗಳ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಕರ್ನಾಟಕ ಚುನಾವಣೆ 2023 : ಬಿಜೆಪಿ ಅಭ್ಯರ್ಥಿಗಳು ಮತ್ತು ಕ್ಷೇತ್ರಗಳ ಸಂಪೂರ್ಣ ಪಟ್ಟಿ ನಿಮಗಾಗಿ

ಇದನ್ನೂ ಓದಿ : ‘ಪಿಎಂ ಮೋದಿ ವಿಷಕಾರಿ ಹಾವಿನಂತೆ’ ವಿವಾದತ್ಮಾಕ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಯುಟರ್ನ್

ಕರ್ನಾಟಕ ವಿಧಾನಸಭೆ 2023 ರ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾರರಲ್ಲಿ ತಮ್ಮ ಮತದಾನ ಕೇಂದ್ರದ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಯೋಜಿಸಲಾಗಿದೆ ಎಂದು ಹೇಳಿದರು. ಒಂದು ಬಾರಿಗೆ. ಪ್ರಸಕ್ತ ಸಾಲಿನ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 30 ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ‘ನಮ್ಮ ನಡೆ ಮತ್ತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ಏಕಕಾಲಕ್ಕೆ ನಡೆಸಲು ಯೋಜಿಸಲಾಗಿದೆ.

BBMP Chief Commissioner Tushar Girinath: Karnataka Assembly Elections 2023: Voting will start tomorrow from April 29

Comments are closed.