ಬುಧವಾರ, ಜೂನ್ 18, 2025
Homepoliticsಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

- Advertisement -
Alvas1

ಶಿವಮೊಗ್ಗ:ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67 ವರ್ಷ) ಅವರು ಕೋವಿಡ್‌ನಿಂದಾಗಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.

Appaji Gowda

ಕಳೆದ ಮೂರು ದಿನಗಳಿಂದಲೂ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Maks Infotech Web1

ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಎದುರು ಜನ ಸಾಗರವೇ ನೆರೆದಿದೆ. ಸೂಕ್ತ ಸಮಯದಲ್ಲಿ ಬೆಡ್ ಸಿಗಲಿಲ್ಲ ಎಂದು ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಐಎಸ್‌ಎಲ್‌ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು.

Appaji Gowda 1 E1599108802799

ಮಾಜಿ ಶಾಸಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕೊರೊನಾವನ್ನು ಲೆಕ್ಕಿಸದೇ ಆಸ್ಪತ್ರೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅವರ ಅನುಯಾಯಿಗಳು ಜಮಾಯಿಸಿದ್ದರು. ನಂತರ ಮಧ್ಯರಾತ್ರಿ 2 ಗಂಟೆಗೆ ಪಾರ್ಥಿವ ಶರೀರವನ್ನು ಭದ್ರಾವತಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು,‌ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular