BIG BREAKING : ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ಗುಲಾಂ ನಬಿ ಆಜಾದ್​ ರಾಜೀನಾಮೆ

ದೆಹಲಿ : BIG BREAKING : ದೇಶದಲ್ಲಿ ಮೊದಲೇ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಧೂಳೀಪಟವಾಗುತ್ತಿರುವ ಕಾಂಗ್ರೆಸ್​​ಗೆ ಇಂದು ಭಾರೀ ದೊಡ್ಡ ಆಘಾತ ಎದುರಾಗಿದೆ. ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದು ಕಾಂಗ್ರೆಸ್​ಗೆ ಬಹುದೊಡ್ಡ ಹಿನ್ನೆಡೆ ಉಂಟಾಗಿದೆ.


ಕಾಂಗ್ರೆಸ್​ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ ಗುಂಪಿನಲ್ಲಿ ಗುಲಾಂ ನಬಿ ಆಜಾದ್​ ಕೂಡ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಗುಲಾಂ ನಬಿ ಆಜಾದ್​ ಜಮ್ಮು & ಕಾಂಗ್ರೆಸ್​ ಪ್ರಚಾರ ಸಮಿತಿ ಸ್ಥಾನದಿಂದಲೂ ಅವರು ಕೆಳಗಿಳಿದಿದ್ದರು. ಇನ್ನು ಗುಲಾಂ ನಬಿ ಆಜಾದ್​ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿಯು, ಕಾಂಗ್ರೆಸ್​ ಪಕ್ಷವು ಯಾವುದೇ ನಾಯಕ ಹಾಗೂ ಸಿದ್ಧಾಂತವನ್ನು ಹೊಂದಿಲ್ಲ. ಕಾಂಗ್ರೆಸ್​ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದೆ.

ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಈ ಸಂಬಂಧ ಪತ್ರ ಬರೆದಿರುವ ಗುಲಾಂ ನಬಿ ಆಜಾದ್​, 2013ರಲ್ಲಿ ರಾಹುಲ್​ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪಕ್ಷದ ಎಲ್ಲಾ ಹಿರಿಯ ಹಾಗೂ ಅನುಭವಿ ನಾಯಕರನ್ನು ಬದಿಗಿಟ್ಟಿದ್ದಾರೆ ಹಾಗೂ ಅನುಭವವೇ ಇಲ್ಲದವರು ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳಲು ಆರಂಭಿಸಿದರು ಎಂದು ಆರೋಪಿಸಿದ್ದಾರೆ.


ಕಾಂಗ್ರೆಸ್​ ಪಕ್ಷದ ವೇದಿಕೆಗಳಲ್ಲಿ ಸಕ್ರಿಯರಾಗಿದ್ದ ಗುಲಾಂ ನಬಿ ಆಜಾದ್​ ರಾಜೀನಾಮೆ ಪಕ್ಷದ ಅನೇಕ ನಾಯಕರಿಗೆ ಆಶ್ಚರ್ಯವನ್ನುಂಟು ಮಾಡಿದೆ. ನ್ಯಾಷನಲ್​ ಹೆರಾಲ್ಡ್​ ಪತ್ರಿಕೆ ಅಕ್ರಮ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್​ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕರು ನಡೆಸಿದ್ದ ಗೌರವ ಯಾತ್ರೆಯಲ್ಲಿಯೂ ಸಹ ಗುಲಾಂ ನಬಿ ಆಜಾದ್​ ಭಾಗಿಯಾಗಿದ್ದರು. ಅಲ್ಲದೇ ಈ ಸಂಬಂಧ ಪತ್ರಿಕಾಗೋಷ್ಠಿಗಳಲ್ಲಿಯೂ ಗುಲಾಂ ನಬಿ ಆಜಾದ್​ ಮಾತನಾಡಿದ್ದರು.


ಆಜಾದ್ ಭಿನ್ನಮತೀಯ ಜಿ-23 ರ ಮುಖ್ಯಸ್ಥರಾಗಿದ್ದಾರೆ ಮತ್ತು ಮೇಲ್ಮನೆಗೆ ನಾಮನಿರ್ದೇಶನಕ್ಕಾಗಿ ಪಕ್ಷದಿಂದ ನಿರ್ಲಕ್ಷಿಸಲ್ಪಟ್ಟಿದ್ದರು. ಪಕ್ಷದಲ್ಲಿ ನನ್ನ ಅನುಭವಕ್ಕೆ ಸೂಕ್ತ ಸ್ಥಾನ ಸಿಗಲಿಲ್ಲ ಎಂಬ ಅಸಮಾಧಾನದಿಂದ ಗುಲಾಂ ನಬಿ ಆಜಾದ್​ ಈ ನಿರ್ಧಾರ ಕೈಗೊಂಡಿರುವ ಸಾಧ್ಯತೆ ದಟ್ಟವಾಗಿದೆ. ರಾಜಕೀಯವಾಗಿ ಗುಲಾಂ ಮುಂದಿನ ನಡೆ ಏನು ಎನ್ನುವುದು ಇನ್ನೂ ನಿಗೂಢವಾಗಿದೆ.

ಇದನ್ನು ಓದಿ : Sheldon Jackson: “ನನ್ನ ವಯಸ್ಸು 35, 75 ಅಲ್ಲ” ಅವಕಾಶ ಸಿಗದಿದ್ದಕ್ಕೆ ಬಿಸಿಸಿಐ ವಿರುದ್ಧ ಆಕ್ರೋಶ ಹೊರ ಹಾಕಿದ ಕ್ರಿಕೆಟರ್

ಇದನ್ನೂ ಓದಿ : CJI NV Ramana : ಇಂದು ಸಿಜೆಐ ಎನ್​.ವಿ ರಮಣ ನಿವೃತ್ತಿ : ಸುಪ್ರೀಂ ಕೋರ್ಟ್​ನ ಕಾರ್ಯ ಪ್ರಕ್ರಿಯೆಗಳು ಇತಿಹಾಸದಲ್ಲಿಯೇ ಮೊದಲ ಬಾರಿಗೆ ನೇರ ಪ್ರಸಾರ

BIG BREAKING : Veteran leader Ghulam Nabi Azad resigns from Congress party

Comments are closed.