ಕಲಬುರಗಿ : ಕರ್ನಾಟಕದಲ್ಲಿ ಬಿಟ್ ಕಾಯಿನ್ ಪ್ರಕರಣ (Bitcoin Case ) ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ನಡುವೆ ಪರಸ್ಪರ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ಮುಖಂಡರೇ ಬಿಟ್ ಕಾಯಿನ್ ದಂಧೆಯಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ರಾಜ್ಯವನ್ನಾಳಲಿದ್ದಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್ ಕಾಯಿನ್‌ಗಳು ಎಲ್ಲಿವೆ ? ಸುಮಾರು 35 ಬಿಟ್ ಕಾಯಿನ್‌ಗಳನ್ನು ಜಪ್ತಿ ಮಾಡಿದ್ದಾಗಿ ಹೇಳಿದ್ದಾರೆ. ಈ ಹಗರಣದ ಪಾರದರ್ಶಕ ತನಿಖೆಯಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿಯ 3ನೇ ಮುಖ್ಯಮಂತ್ರಿ ನೋಡುತ್ತೇವೆ. ಇದರಲ್ಲಿ ಯಾರು ಇದ್ದಾರೆಂದು ತನಿಖಾಧಿಕಾರಿಗಳಿಗೆ ಗೊತ್ತಿದೆ. ಸರಿಯಾದ ತನಿಖಾ ಏಜೆನ್ಸಿಗೆ ನೀಡಿದರೆ ಪ್ರಕರಣ ಬಯಲಾಗುತ್ತೆ ಎಂದಿದ್ದಾರೆ.

ರಾಜ್ಯದಲ್ಲಿ ಪಡಿತರ ಹಂಚಿಕೆಗಿಂತ ಗಾಂಜಾ ಸಾಗಾಟ ಸುಲಭವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಸುಲಭವಾಗಿ ಸಿಗುತ್ತಿದೆ.ಬಾರ್ ಗಳಿಂದ ಬಾರ್ಗಳಿಂದ 5 ಸಾವಿರ ಹಫ್ತಾ ವಸೂಲಿ ಮಾಡುತ್ತಾರೆ. ಬಿಜೆಪಿ ಸೇರಿದರೆ ರೌಡಿಶೀಟರ್ ಪಟ್ಟಿಯಲ್ಲಿ ಹೆಸರು ಇರಲ್ಲ. ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಬದಲಾಗುತ್ತಾ ಬಿಜೆಪಿ ನಾಯಕತ್ವ: ಉಸ್ತುವಾರಿ ಅರುಣ್ ಸಿಂಗ್ ಏನಂದ್ರು ಗೊತ್ತಾ?
ಇದನ್ನೂ ಓದಿ : ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ : 25 ಸ್ಥಾನಗಳಿಗೆ ಡಿ.10 ರಂದು ಚುನಾವಣೆ
( Bitcoin Case Karnataka CM will be Changed, Congress MLA Priyank Kharge Reaction)