Bitcoin Case : ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಕರ್ನಾಟಕದಲ್ಲಿ ಬಿಟ್‌ ಕಾಯಿನ್‌ ಪ್ರಕರಣ (Bitcoin Case ) ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷ ನಡುವೆ ಪರಸ್ಪರ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ನಾಯಕರು ಬಿಜೆಪಿ ಮುಖಂಡರೇ ಬಿಟ್‌ ಕಾಯಿನ್‌ ದಂಧೆಯಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ರಾಜ್ಯವನ್ನಾಳಲಿದ್ದಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Bjp Bhusanur Ramesh Balappa Sindagi and congress Srinivasa Mane win Hanagal assembly By -election 2021
ಸಾಂದರ್ಭಿಕ ಚಿತ್ರ

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್‌ ಕಾಯಿನ್‌ಗಳು ಎಲ್ಲಿವೆ ? ಸುಮಾರು 35 ಬಿಟ್ ಕಾಯಿನ್‌ಗಳನ್ನು ಜಪ್ತಿ ಮಾಡಿದ್ದಾಗಿ ಹೇಳಿದ್ದಾರೆ. ಈ ಹಗರಣದ ಪಾರದರ್ಶಕ ತನಿಖೆಯಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿಯ 3ನೇ ಮುಖ್ಯಮಂತ್ರಿ ನೋಡುತ್ತೇವೆ. ಇದರಲ್ಲಿ ಯಾರು ಇದ್ದಾರೆಂದು ತನಿಖಾಧಿಕಾರಿಗಳಿಗೆ ಗೊತ್ತಿದೆ. ಸರಿಯಾದ ತನಿಖಾ ಏಜೆನ್ಸಿಗೆ ನೀಡಿದರೆ ಪ್ರಕರಣ ಬಯಲಾಗುತ್ತೆ ಎಂದಿದ್ದಾರೆ.

CM Basavaraj Bommai Gift for Diwali: Petrol and Diesel Price Rs.7 Reduced Karnataka
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

ರಾಜ್ಯದಲ್ಲಿ ಪಡಿತರ ಹಂಚಿಕೆಗಿಂತ ಗಾಂಜಾ ಸಾಗಾಟ ಸುಲಭವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಸುಲಭವಾಗಿ ಸಿಗುತ್ತಿದೆ.ಬಾರ್ ಗಳಿಂದ ಬಾರ್ಗಳಿಂದ 5 ಸಾವಿರ ಹಫ್ತಾ ವಸೂಲಿ ಮಾಡುತ್ತಾರೆ. ಬಿಜೆಪಿ ಸೇರಿದರೆ ರೌಡಿಶೀಟರ್ ಪಟ್ಟಿಯಲ್ಲಿ ಹೆಸರು ಇರಲ್ಲ. ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಬದಲಾಗುತ್ತಾ ಬಿಜೆಪಿ ನಾಯಕತ್ವ: ಉಸ್ತುವಾರಿ ಅರುಣ್ ಸಿಂಗ್ ಏನಂದ್ರು ಗೊತ್ತಾ?

ಇದನ್ನೂ ಓದಿ : ವಿಧಾನ ಪರಿಷತ್‌ ಚುನಾವಣೆಗೆ ಮುಹೂರ್ತ ಫಿಕ್ಸ್‌ : 25 ಸ್ಥಾನಗಳಿಗೆ ಡಿ.10 ರಂದು ಚುನಾವಣೆ

( Bitcoin Case Karnataka CM will be Changed, Congress MLA Priyank Kharge Reaction)

Comments are closed.