ಬೆಂಗಳೂರು :ks eshwarappa : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವು ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಾಂಗ್ರೆಸ್ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾಳೆ 24 ಗಂಟೆಗಳ ಕಾಲ ಅಹೋರಾತ್ರಿ ಧರಣಿ ನಡೆಸಲಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳು ಕಳೆದರೂ ಸಹ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳದ ಬಿಜೆಪಿ ನಡೆ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಚುನಾವಣೆ ಬೇರೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಬಹುಮುಖ್ಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಂಡು ಬಿಜೆಪಿ ಮುಖಕ್ಕೆ ಭ್ರಷ್ಟಾಚಾರ ಮಸಿ ಬಳಿಯುವ ಕಾರ್ಯವನ್ನು ಮಾಡುತ್ತಿದೆ. ಭ್ರಷ್ಟಾಚಾರದ ಆರೋಪದಿಂದ ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿಯನ್ನು ಈ ಅಪವಾದದಿಂದ ಪಾರು ಮಾಡಲು ಹೈಕಮಾಂಡ್ ಮಧ್ಯ ಪ್ರವೇಶಿಸಿದ ಎನ್ನಲಾಗಿದೆ. ಇನ್ನೆರಡು ದಿನಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಈಶ್ವರಪ್ಪಗೆ ಸೂಚನೆ ನೀಡಲಿದೆ ಎನ್ನಲಾಗಿದೆ.
ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳುತ್ತಲೇ ಇದ್ದಾರೆ. ಆದರೆ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಿಜೆಪಿ ತಯಾರಿಲ್ಲ. ಹೀಗಾಗಿ ಈ ಸಂಬಂಧ ಬಿ.ಎಲ್ ಸಂತೋಷ್ರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವರದಿಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿನ್ನಡೆ ಈ ಪ್ರಕರಣ ಕಾರಣವಾಗಬಾರದು ಎಂಬುದು ಹೈಕಮಾಂಡ್ ಚಿಂತನೆಯಾಗಿದೆ.
ಹೀಗಾಗಿ ಸಂಪೂರ್ಣ ವರದಿಯನ್ನು ಪರಾಮರ್ಶಿಸಿರುವ ಜೆ.ಪಿ ನಡ್ಡಾ ಕೆ.ಎಸ್ ಈಶ್ವರಪ್ಪ ಬಳಿಯಲ್ಲಿ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ಕೇಳುವ ಸಾಧ್ಯತೆಯಿದೆ ಎನ್ನಲಾಗಿದೆ. ಈಶ್ವರಪ್ಪ ರಾಜೀನಾಮೆ ನೀಡಿದಲ್ಲಿ ಕಾಂಗ್ರೆಸ್ ಹೋರಾಟ ತಣ್ಣಗಾಗಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ.
ಇದನ್ನು ಓದಿ :KS Eshwarappa : ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು:ನಾಳೆ ಅಹೋರಾತ್ರಿ ಧರಣಿ
ಇದನ್ನೂ ಓದಿ : KS Eshwarappa vs KJ George : ನನ್ನ ಹಾಗೇ ಈಶ್ವರಪ್ಪನೂ ರಾಜೀನಾಮೆ ನೀಡಲಿ : ಮಾಜಿ ಸಚಿವ ಕೆ.ಜೆ.ಜಾರ್ಜ್ ಆಗ್ರಹ
bjp high command may have asked ks eshwarappa to resig in the next two days