BJP MLA Protest : ಸರಕಾರದ ವಿರುದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆ

ಬೆಂಗಳೂರು : ತಮ್ಮ ವಿಧಾನಸಭಾ ಕ್ಷೇತ್ರವನ್ನು ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ವ್ಯಾಪ್ತಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ವಿಧಾನಸೌಧ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಒಂಟಿ ಪ್ರತಿಭಟನೆ ನಡೆಸಿದ್ದಾರೆ.

ಮಲೆನಾಡು ಹಾಗೂ ಕುಗ್ರಾಮಗಳಿಂದ ಕೂಡಿರುವ ಚಿಕ್ಕಮಗಳೂರು ಮೂಡಿಗೆರೆ ಕ್ಷೇತ್ರದಲ್ಲಿ ಅತಿವೃಷ್ಟಿ ಸಮಸ್ಯೆ ತಲೆದೋರಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಬಿದ್ದ ಮಹಾಮಳೆಗೆ ಸಾಕಷ್ಟು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಇದುವರೆಗೂ ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿಲ್ಲ. ವಿಧಾನಸಭಾ ಕ್ಷೇತ್ರವನ್ನು ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಮತ್ತು ಟ್ವಿಟರ್ ನಡುವೆ ಮುಗಿಯದ ವಾರ್…! ಸುರ್ಜೆವಾಲಾ ಸೇರಿ ಹಲವು ನಾಯಕರ ಅಕೌಂಟ್ ಲಾಕ್…!!

ಇನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಆರ್‌.ಅಶೋಕ್‌ ಅವರನ್ನು ಶಾಸಕ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ತಾನೊಬ್ಬ ಹಿರಿಯ ಶಾಸಕ, ನಾನು ಎಂದಾದರೂ ಬ್ಲಾಕ್‌ಮೇಲ್‌ ಮಾಡಿದ್ದೇನೆಯೇ. ನನ್ನ ಮಾತಿಗೆ ಬೆಲೆ, ತೂಕ ಇಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಸರಕಾರ ಕ್ಷೇತ್ರದ ಜನತೆಯ ಸಮಸ್ಯೆಗೆ ಸ್ಪಂದಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಐಶಾರಾಮಿ ಕಾರುಗಳಿಗೆ ಬೆಂಕಿ : ಈ ಬಗ್ಗೆ ಶಾಸಕ ಸತೀಶ್‌ ರೆಡ್ಡಿ ಹೇಳಿದ್ದೇನು

Comments are closed.