ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ (MLA MP Kumaraswamy) ಅವರಿಗೆ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಒಟ್ಟು 8 ಪ್ರಕರಣಗಳಿಗೆ ಸಂಬಂಧಿಸಿದಂತೆ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದ್ದು, ಒಟ್ಟು 4 ವರ್ಷಗಳ ಕಾಲ ಶಾಸಕ ಕುಮಾರಸ್ವಾಮಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

ಶಾಸಕ ಕುಮಾರಸ್ವಾಮಿ ಅವರು ಹೂವಪ್ಪ ಗೌಡ ಅವರಿಂದ 1.35 ಕೋಟಿ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದರು. ಸಾಲ ಮರುಪಾವತಿಗಾಗಿ ಒಟ್ಟು 8 ಚೆಕ್ ಗಳನ್ನು ನೀಡಿದ್ದರು. ಆದರೆ ಎಲ್ಲಾ ಚೆಕ್ ಗಳು ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹೂವಪ್ಪ ಗೌಡ ಅವರು ಜನಪ್ರತಿನಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ವಿವಾದ ಆಲಿಸಿರುವ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಒಟ್ಟು ಎಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ : Modi tight schedule: ಪ್ರಧಾನಿ ಮೋದಿ ದಿನಕ್ಕೆ ಎಷ್ಟು ಕಿಮೀ ಪ್ರಯಾಣ, ಎಷ್ಟು ಸಭೆಯಲ್ಲಿ ಪಾಲ್ಗೋಳ್ಳತ್ತಾರೆ ಗೊತ್ತಾ ?

ಇದನ್ನೂ ಓದಿ : Narenda Modi : ರಾಜಭವನದಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಅನಿಲ್ ಕುಂಬ್ಳೆ, ಮಯಾಂಕ್ ಅಗರ್ವಾಲ್

BJP Mudigere MLA MP Kumaraswamy Sentenced to 4 years Jain Cheque bounce Case

Comments are closed.