ಬೆಂಗಳೂರು :2023 karnataka poll battle : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಹೀಗಿರುವಾಗ ಎಲ್ಲಾ ಪಕ್ಷಗಳು ಮುಂದಿನ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಏನೆಲ್ಲ ತಯಾರಿ ಬೇಕೋ ಅವೆಲ್ಲವನ್ನೂ ಮಾಡಿಕೊಳ್ಳುತ್ತಿವೆ. ಅದೇ ರೀತಿ ಬಿಜೆಪಿ ಕೂಡ ರಾಜ್ಯದಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲೇಬೇಕೆಂದು ಪಟ್ಟು ಹಿಡಿದು ಕುಳಿತಿದೆ. ಬಿಜೆಪಿಯ ಪ್ರಮುಖ ಅಸ್ತ್ರವಾಗಿರುವ ಲಿಂಗಾಯತ ಸಮದಾಯವನ್ನು ಓಲೈಸಲು ಈಗಾಗಲೇ ಲಿಂಗಾಯತ ಸಮುದಾಯದ ನಾಯಕರೇ ಸಿಎಂ ಪಟ್ಟದಲ್ಲಿ ಕುಳಿತಿದ್ದಾರೆ. ಇದರ ಜೊತೆಯಲ್ಲಿ ಒಕ್ಕಲಿಗರನ್ನೂ ತನ್ನ ಸೆಳೆದುಕೊಳ್ಳಲು ಬಿಜೆಪಿಯು ಹೊಸ ಪ್ಲಾನ್ ಒಂದನ್ನು ರೂಪಿಸಿದೆ.
ಜೆಡಿಎಸ್ನ ಪ್ರಮುಖ ಬಲ ಒಕ್ಕಲಿಗರು. ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಒಕ್ಕಲಿಗ ನಾಯಕ. ಹೀಗಾಗಿ ಬಿಜೆಪಿ ಕೂಡ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಿಗೆ ಪಕ್ಷದಲ್ಲಿ ವಿಶೇಷವಾದ ಜವಾಬ್ದಾರಿಯನ್ನು ನೀಡಿ ಒಕ್ಕಲಿಗ ವೋಟ್ ಬ್ಯಾಂಕ್ನ್ನು ಒಡೆಯುವ ರಣತಂತ್ರ ರೂಪಿಸಿದೆ. ಈ ವರ್ಷದ ಆಗಸ್ಟ್ ತಿಂಗಳಲ್ಲಿ ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಹೀಗಾಗಿ ಈ ಸ್ಥಾನಕ್ಕೆ ಒಕ್ಕಲಿಗ ನಾಯಕರನ್ನು ಕೂರಿಸುವ ಪ್ಲಾನ್ ಬಿಜೆಪಿಯದ್ದು.
ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಇದರ ಜೊತೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ. ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ಈ ರೇಸ್ನಲ್ಲಿ ಇದ್ದಾರೆ ಎನ್ನಲಾಗಿದೆ .
ಇದರ ಜೊತೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರೂ ಸಹ ಬಿ.ಎಸ್ ಯಡಿಯೂರಪ್ಪರಿಗೆ ರಾಜ್ಯದಲ್ಲಿ ಅಭಿಮಾನಿಗಳಿಗೇನು ಕೊರತೆಯಿಲ್ಲ. ಈ ವಿಚಾರವನ್ನು ಗಮನದಲ್ಲಿಟ್ಟುಕ್ಕೊಂಡು ಹಾಗೂ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ಗೆ ಸೆಡ್ಡು ಹೊಡೆಯುವ ಸಲುವಾಗಿ ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.
ಇದನ್ನು ಓದಿ : Aravind Kaushik Arrest : ಸ್ಯಾಂಡಲ್‌ವುಡ್ ನಿರ್ದೇಶಕ ಅರವಿಂದ ಕೌಶಿಕ್ ಅರೆಸ್ಟ್
bjp strives to get all equations right before 2023 karnataka poll battle