ಬೆಂಗಳೂರು : Throw Eggs At Siddaramaiahs Car : ನೆರೆ ಹಾನಿಗೆ ಒಳಗಾಗಿದ್ದ ಕೊಡಗು ಜಿಲ್ಲೆಗೆ ಪ್ರವಾಸವನ್ನು ಕೈಗೊಂಡಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಭಾರೀ ವಿರೋಧವನ್ನು ಎದುರಿಸಿದ್ದಾರೆ. ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಆಗಮಿಸಿದ್ದನ್ನು ವಿರೋಧಿಸಿದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಿದ್ದು ಖಾನ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದು ಮಾತ್ರವಲ್ಲದೇ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆಯನ್ನೂ ಎಸೆದಿದ್ದಾರೆ.
ಈ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಬಿಜೆಪಿ ಕಾರ್ಯಕರ್ತರ ಈ ನಡೆಗೆ ಕಾಂಗ್ರೆಸ್ ನಾಯಕರು ಮಾತ್ರವಲ್ಲದೇ ಸ್ವಪಕ್ಷದ ನಾಯಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಆರ್.ಅಶೋಕ್ ಸೇರಿದಂತೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದು ಈ ಸ್ಥಾನಕ್ಕೆ ತನ್ನದೇ ಆದ ಗೌರವವಿದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ಬರೆದಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತರು ಈ ರೀತಿ ಮಾಡಬಾರದಿತ್ತು ಎಂದು ಖಂಡಿಸಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ್ ಕೂಡ ಈ ವಿಚಾರವಾಗಿ ಟ್ವೀಟಾಯಿಸಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಸಂಪ್ರದಾಯವಲ್ಲ. ವಿರೋಧವನ್ನು ವೈಚಾರಿಕತೆಯಿಂದಲೇ ತೋರಿಸಬೇಕು. ವಿನಃ ಇಂತಹ ಸಂಪ್ರದಾಯದಿಂದಲ್ಲ ಎಂದು ಟ್ವೀಟಾಯಿಸಿದ್ದಾರೆ.
ಇತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರ ನಡೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಲಿದೆ. ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಕೃತ್ಯವನ್ನು ಎಸಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಮಾಜಿ ಸಚಿವ ಹೆಚ್.ಎಂ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಇದನ್ನು ಓದಿ : KL Rahul advice his young Fan: “ಶಾಲೆಗೆ ಹೋಗು, ಉಳಿದದ್ದೆಲ್ಲಾ ಆಮೇಲೆ..” ಆಟೋಗ್ರಾಫ್ ಕೇಳಲು ಬಂದ ಅಭಿಮಾನಿಗೆ ರಾಹುಲ್ ಬುದ್ಧಿಮಾತು
Bjp Youth Wing Members Throw Eggs At Siddaramaiahs Car In Kodagu Congress Leaders Protest In Bengaluru