Tejasvi Surya : ಮುಸ್ಲಿಂರನ್ನು, ಕಿಶ್ಚಿಯನ್ನರನ್ನು ಮರಳಿ ಹಿಂದೂ ಧರ್ಮಕ್ಕೆ ತರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಗೆ ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಯನ್ನು ತೇಜಸ್ವಿ ಸೂರ್ಯ ಹಿಂಪಡೆದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಎರಡು ದಿನಗಳ ಹಿಂದೆ ಉಡುಪಿಯಲ್ಲಿ ನಾನು ನೀಡಿರುವ ಹೇಳಿಕೆಯು ತೀವ್ರ ವಿವಾದಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ನನ್ನ ಹೇಳಿಕೆಯನ್ನು ಹಿಂಪಡೆದು ವಿಷಾದಿಸುತ್ತಿದ್ದೇನೆ ಎಂದು ಬರೆದು ಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಭಾರತದಲ್ಲಿ ಹಿಂದೂ ಪುನರುತ್ಥಾನ ಎಂಬ ವಿಷಯದ ಬಗ್ಗೆ ಮಾತನಾಡಿದ್ದರು. ಹಿಂದೂ , ಮುಸ್ಲಿಮರನ್ನು ಮರಳಿ ಹಿಂದೂ ಮಡಿಲಿಗೆ ತರಬೇಕು. ಅವರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ ಎಂದು ಹೇಳಿಕೆ ನೀಡಿದ್ದರು.
ಹಿಂದೂ ಧರ್ಮದ ಶ್ರೇಷ್ಠತೆ ಹಾಗೂ ಧರ್ಮದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮಾತನಾಡಿದರೆ ಪೊಲೀಸರು ನೇರವಾಗಿ ಬಂಧಿಸುತ್ತಿದ್ದರು. ಬೇರೆಯವರ ಬಗ್ಗೆ ಮಾತನಾಡುವುದೇ ಅಪರಾಧ ಎಂದು ಜಾತ್ಯಾತೀತರು ಭಯ ಹುಟ್ಟಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಈಗ ನಾನು ಧೈರ್ಯದಿಂದ ಬಹಿರಂಗವಾಗಿ ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಬಹುದು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.
ನಾನು ಎರಡು ದಿನಗಳ ಹಿಂದೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಹಿಂದೂ ಪುನರುತ್ಥಾನ ವಿಚಾರವಾಗಿ ಮಾತನಾಡಿದ್ದೆ.ನನ್ನ ಭಾಷಣದ ಕೆಲವು ಸಾಲುಗಳು ವಿಷಾದನೀಯ ವಿವಾದವನ್ನು ಸೃಷ್ಟಿಸಿವೆ.ಆದ್ದರಿಂದ ನಾನು ನನ್ನ ಹೇಳಿಕೆಗಳನ್ನು ವಿಷಾದದಿಂದ ಹಿಂಪಡೆಯುತ್ತಿದ್ದೇನೆ ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟಾಯಿಸಿದ್ದಾರೆ.
ಇದನ್ನೂ ಓದಿ : Jarakiholi Master Plan : ಲಖನ್ ಬಿಜೆಪಿ ಸೇರ್ಪಡೆಗೆ ಸಿದ್ಧವಾಯ್ತು ಮಾಸ್ಟರ್ ಪ್ಲ್ಯಾನ್ : ಹೈಕಮಾಂಡ್ ಮುಂದೇ ಷರತ್ತು ಇಟ್ಟ ರಮೇಶ್
ಇದನ್ನು ಓದಿ: Basavaraj Bommai Knee Pain : ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ
bjp Tejasvi Surya withdraws Hindu revival remarks after viral video