bs yeddiyurappa : ಸಂಸದೀಯ ಮಂಡಳಿ ಆಯ್ಕೆ ಬಳಿಕ ಮೊದಲ ಬಾರಿಗೆ ದೆಹಲಿಗೆ ಹಾರಿದ ಬಿಎಸ್​ವೈ : ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಸುಳಿವು

ದೆಹಲಿ : bs yeddiyurappa : ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಆಯ್ಕೆಯಾದ ಬಳಿಕ ಬಿ.ಎಸ್​ ಯಡಿಯೂರಪ್ಪ ಇದೇ ಮೊದಲ ಬಾರಿಗೆ ದಿಢೀರ್​​ ದೆಹಲಿಗೆ ತೆರಳಿದ್ದಾರೆ. ದೆಹಲಿ ತಲುಪಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ರಾಜಕಾರಣದ ಮಹತ್ವದ ಚರ್ಚೆಯನ್ನು ವರಿಷ್ಠರ ಜೊತೆ ನಡೆಸಲಿದ್ದಾರೆ.


ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬಿ.ಎಸ್​ ಯಡಿಯೂರಪ್ಪ ದೆಹಲಿ ತಲುಪಿದ್ದಾರೆ. ದೆಹಲಿ ತಲುಪುತ್ತಿದ್ದಂತೆಯೇ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಯಡಿಯೂರಪ್ಪ ರಾಜ್ಯದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯಾಗಲಿದೆ ಎಂಬ ಮಹತ್ವದ ಸುಳಿವನ್ನು ನೀಡಿದ್ದಾರೆ.


ದೆಹಲಿಯಲ್ಲಿ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಇಂದು ರಾತ್ರಿ 8 ಗಂಟೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ,ಪಿ ನಡ್ಡಾರನ್ನು ಭೇಟಿಯಾಗಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯನ್ನು ಶೀಘ್ರದಲ್ಲಿಯೇ ಭೇಟಿಯಾಗಲಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾಗಲು ಸಮಯಾವಕಾಶವನ್ನು ಕೇಳಿದ್ದೇನೆ. ಮೂವರನ್ನು ಇಂದು ಭೇಟಿ ಮಾಡುತ್ತೇನೆ. ನನಗೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ ಬಳಿಕ ಪಕ್ಷದ ವರಿಷ್ಠರಿಗೆ ಧನ್ಯವಾದ ಸಲ್ಲಿಸುವುದು ನನ್ನ ಕರ್ತವ್ಯ. ನಾವು ಅದಕ್ಕಾಗಿಯೇ ಇಲ್ಲಿಗೆ ಆಗಮಿಸಿದ್ದೇನೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆಯೂ ವರಿಷ್ಠರ ಜೊತೆಯಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.


ಇನ್ನು ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚೆಗಳು ಹೆಚ್ಚುತ್ತಿರುವ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ನಾನು ಈ ವಿಚಾರವನ್ನು ಚರ್ಚೆ ಮಾಡಬೇಕೆಂದು ದೆಹಲಿಗೆ ಆಗಮಿಸಿದ್ದೇನೆ.ಆದರೆ ಈ ಬಗ್ಗೆ ವರಿಷ್ಠರು ಕೇಳಿದರೆ ಚರ್ಚೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.

ಇದನ್ನು ಓದಿ : DK Shivakumar : ಮತ್ತೊಮ್ಮೆ ಸಿಎಂ ಸ್ಥಾನದ ಅಭಿಲಾಷೆ ಹೊರಹಾಕಿದ ಡಿಕೆಶಿ : ಒಕ್ಕಲಿಗರ ಬಳಿ ಆಶೀರ್ವಾದ ಬೇಡಿದ ಕನಕಪುರ ಬಂಡೆ

ಇದನ್ನೂ ಓದಿ : Rahul Gandhi is actually a blessing for BJP : ‘ರಾಹುಲ್​ ಬಿಜೆಪಿ ಪಾಲಿಗೆ ವರದಾನವಿದ್ದಂತೆ’ : ಆಸ್ಸಾಂ ಸಿಎಂ ವ್ಯಂಗ್ಯ

bs yeddiyurappa keeps state bjp chief change issue open

Comments are closed.