ಅಂತಿಮ ಘಟ್ಟ ತಲುಪಿದ ಸಂಪುಟ ಸರ್ಕಸ್​ : ಮೊದಲ ಹಂತದಲ್ಲಿ 10 ಸಚಿವರಿಂದ ಪ್ರಮಾಣವಚನ

ಜೂನ್​ 3ರಂದು ಶಾಸಕಾಂಗ ಪಕ್ಷ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದೆ. ಇವರ ಜೊತೆಯಲ್ಲಿ 8 ರಿಂದ 10 ಸಚಿವರು ಕೂಡ ಅದೇ ದಿನದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಜೂನ್​ 3ರಂದು ಶಾಸಕಾಂಗ ಪಕ್ಷ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದೆ. ಇವರ ಜೊತೆಯಲ್ಲಿ 8 ರಿಂದ 10 ಸಚಿವರು ಕೂಡ ಅದೇ ದಿನದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜೂನ್​ 3ರಂದು ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಎಂಟರಿಂದ ಹತ್ತು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಾಗಿ 15 ದಿನಗಳ ಒಳಗಾಗಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯ ಬಳಿಕ ಸಚಿವಾಕಾಂಕ್ಷಿಗಳಿಗೆ ಮತ್ತೆ ಕನಸು ಚಿಗುರೊಡೆದಿದ್ದು, ಜೂನ್​ 3ರಂದು ಯಾರಿಗೆಲ್ಲ ಪ್ರಮಾಣ ವಚನದ ಭಾಗ್ಯ ಕಾದಿದೆ ಎಂಬ ಕುತೂಹಲ ಶುರುವಾಗಿದೆ.

Also Read: ಸಿದ್ದು ಪುತ್ರನಿಗೆ ಹೈಕಮಾಂಡ್​ನಿಂದ ಬಂಪರ್​ ಆಫರ್​ : ನಾನೂ ಸಚಿವಾಕಾಂಕ್ಷಿ ಎಂದ ಯತೀಂದ್ರ ಸಿದ್ದರಾಮಯ್ಯ

ಇನ್ನು ಇಂದು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಲಿದ್ದು, ಸಚಿವ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಜೂನ್​ 3ರಂದು ಯಾರಿಗೆಲ್ಲ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬೇಕು ಎಂಬುದರ ಬಗ್ಗೆಯೂ ಇಂದು ಚರ್ಚೆ ನಡೆಯಲಿದ್ದು, ಇದರ ಜೊತೆಯಲ್ಲಿ ಸದ್ಯ ಖಾಲಿಯಾಗುತ್ತಿರುವ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಯಾರಿಗೆ ನೀಡೋಣ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜೊತೆಯಲ್ಲಿ ವಿಧಾನಪರಿಷತ್​ ಚುನಾವಣೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿಯೂ ಹೈಕಮಾಂಡ್​ ನಿಲುವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.

Cabinet circus reaches final stage 10 ministers take oath in first phase

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories