cabinet will be expand :ಮುಂದಿನ ಮೂರು ದಿನಗಳೊಳಗಾಗಿ ಸಂಪುಟ ವಿಸ್ತರಣೆಯೆಂದ ಯಡಿಯೂರಪ್ಪ

ಬೆಂಗಳೂರು :cabinet will be expand : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ವರ್ಷ ಬಾಕಿ ಇರುವಾಗಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರವಾಗಿ ಹರಿದಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಪುಟ ಪುನಾರಚನೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಂಪೂರ್ಣ ನೀಲ ನಕ್ಷೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಾ.ಕೆ ಸುಧಾಕರ್​, ಆರ್​.ಅಶೋಕ್​, ಎಂಟಿಬಿ ನಾಗರಾಜ್​,ಶಶಿಕಲಾ ಜೊಲ್ಲೆ ಸೇರಿದಂತೆ ಆರು ಮಂದಿಯನ್ನು ಸಂಪುಟದಿಂದ ಕೈ ಬಿಟ್ಟು ಇವರ ಜಾಗಗಳಿಗೆ ಹೊಸ ಮುಖಗಳಿಗೆ ಅವಕಾಶ ನೀಡುವುದು ಹೈಕಮಾಂಡ್​ ಲೆಕ್ಕಾಚಾರ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.


ಇನ್ನು ಇದೇ ವಿಚಾರವಾಗಿ ದುಬೈ ಪ್ರವಾಸಕ್ಕೆ ತೆರಳುವ ಮುನ್ನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ , ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್​ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ರಾಜ್ಯ ಬಿಜೆಪಿ ನಾಯಕರು ಬದ್ಧರಾಗಿರುತ್ತಾರೆ. ಇನ್ನು ಮೂರು ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಲ್ಲಿ 150 ಸೀಟುಗಳನ್ನು ಗೆಲ್ಲುವುದೇ ನಮ್ಮ ಗುರಿಯಾಗಿದೆ. ಪ್ರಧಾನಿ ಮೋದಿಯವರಿಗೂ ನಾವು ಈ ಬಗ್ಗೆ ಮಾತು ಕೊಟ್ಟಿದ್ದೇವೆ. ವಿಧಾನಸಭಾ ಚುನಾವಣೆಗೂ ಮುನ್ನ ನಾವು ಸಂಪೂರ್ಣ ರಾಜ್ಯ ಪ್ರವಾಸ ಕೈಗೊಳ್ಳುತ್ತೇವೆ. ಪ್ರತಿ ಜಿಲ್ಲೆಯಿಂದ ಬಹುತೇಕ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ 2500 ಕೋಟಿ ರೂಪಾಯಿ ರೆಡಿ ಇಟ್ಟುಕೊಳ್ಳಿ ನಿಮ್ಮನ್ನು ಸಿಎಂ ಮಾಡುತ್ತೇವೆ ಎಂದು ನನಗೆ ಆಫರ್​ ಬಂದಿತ್ತು ಎಂಬ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಯ ಬಗ್ಗೆ ನಾನೇನೂ ಮಾತನಾಡಲಾರೆ.ಪಕ್ಷದ ವರಿಷ್ಠರಿದ್ದಾರೆ. ಅವರೇ ಇದನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.


ಇಂದು ದುಬೈಗೆ ಪ್ರಯಾಣಿಸುತ್ತಿರುವ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ನಾಳೆ ದುಬೈನ ಬಸವ ಸಮಿತಿಯಿಂದ ನೀಡಲಾಗುವ ಬಸವಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಇದನ್ನು ಓದಿ : MI vs GT IPL 2022 : ಮುಂಬೈ ಇಂಡಿಯನ್ಸ್‌ ಪರ ಕಣಕ್ಕೆ ಇಳಿಯಲಿದ್ದಾರೆ ಅರ್ಜುನ್ ತೆಂಡೂಲ್ಕರ್

ಇದನ್ನೂ ಓದಿ : lpg cylinder price increased : ಶ್ರೀಸಾಮಾನ್ಯನ ಜೇಬಿಗೆ ಮತ್ತೊಂದು ಬರೆ : ಗೃಹ ಬಳಕೆಯ ಸಿಲಿಂಡರ್​ ದರದಲ್ಲಿ 50 ರೂ. ಏರಿಕೆ

cabinet will be expand next 3 days bsy

Comments are closed.