ಜಾತಿ ಸಮೀಕ್ಷೆ – ಕೈಬಿಟ್ಟ ಜಾತಿ ಸೇರ್ಪಡೆಗೆ ಸೆ.1ರ ವರೆಗೆ ಅವಧಿ ವಿಸ್ತರಣೆಗೆ : ಸುನಿಲ್ ಕುಮಾರ್ ಮನವಿಗೆ ಸ್ಪಂದಿಸಿದ ಆಯೋಗ

caste survey karnataka : ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಪ್ರಕಟಿಸಿದ್ದ ಜಾತಿ ಪಟ್ಟಿಗೆ ಆಕ್ಷೇಪ ಸಲ್ಲಿಸುವುದಕ್ಕೆ ವಿಧಿಸಿದ್ದ ಕಾಲಾವಧಿಯನ್ನು ಸೆ.1ರ ವರೆಗೆ ವಿಸ್ತರಿಸಿದೆ.
ಬಿಜೆಪಿಯ ಹಿರಿಯ ಶಾಸಕರಾದ ಸುನಿಲ್ ಕುಮಾರ್ ಅವರ ನೇತೃತ್ವದ ಬಿಜೆಪಿ ನಿಯೋಗ ಆಯೋಗಕ್ಕೆ ಹೆಚ್ಚುವರಿ (caste survey karnataka) ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು. ಇದೀಗ ಆಯೋಗ ನಿಯೋಗದ ಮನವಿಗೆ ಸ್ಪಂದಿಸಿದೆ.
ಕರ್ನಾಟಕ ಸರಕಾರದ ಆದೇಶ ಅನುಸಾರ ಆಯೋಗ ಇದೀಗ ಕಾಲಾವಧಿಯನ್ನು ವಿಸ್ತರಣೆ ಮಾಡಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ. ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ ಅಂತ ಜಾತಿಗಳ ಸೇರ್ಪಡೆಗೆ 07 ದಿನಗಳ ಕಾಲಾವಕಾಶ ನೀಡುವಂತೆ ಕೋರಲಾಗಿತ್ತು.
ಇದನ್ನೂ ಓದಿ : ಬಿಜೆಪಿಯಿಂದ ಸೆಪ್ಟೆಂಬರ್ 1 ರಂದು ಧರ್ಮಸ್ಥಳ ಚಲೋ
ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಹಿನ್ನೆಲೆಯಲ್ಲಿ ಸೇರ್ಪಡೆ ಅವಧಿಯನ್ನು ಸೆಪ್ಟೆಂಬರ್ 1ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು. ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಸದಸ್ಯ ಕಾರ್ಯದರ್ಶಿಗಳು ,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



