ಬೆಂಗಳೂರು :chief minister basavaraj bommai: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವು ಕಾಂಗ್ರೆಸ್ ಪಾಲಿಗೆ ಬಿಜೆಪಿ ಸರ್ಕಾರದ ವಿರುದ್ಧ ಉರುಳಿಸಬಹುದಾದ ಬಹುದೊಡ್ಡ ಅಸ್ತ್ರವಾಗಿ ಮಾರ್ಪಾಡಾಗಿದೆ. ವಿಧಾನಸಭಾ ಚುನಾವಣೆ ಬೇರೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವನ್ನು ಮುಂದಿಟ್ಟುಕೊಂಡು ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಯಾವೆಲ್ಲ ರೀತಿಯಲ್ಲಿ ಮಸಿ ಬಳಿಯಬೇಕೋ ಆ ಎಲ್ಲಾ ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್ನ ಎಲ್ಲಾ ಆರೋಪಗಳ ವಿರುದ್ಧ ಇಂದು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಈ ಪ್ರಕರಣದಲ್ಲಿ ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹರಿಹಾಯ್ದರು.
ಬೆಂಗಳೂರಿನ ಆರ್.ಟಿ ನಗರದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ವಿಪಕ್ಷ ಸ್ಥಾನದಲ್ಲಿದ್ದುಕೊಂಡು ಕಾಂಗ್ರೆಸ್ ಜವಾಬ್ದಾರಿಯಿಂದ ವರ್ತಿಸಬೇಕು. ಬೇರೆ ನಾಯಕರ ಮೇಲೆ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ತೋರಿಸಬೇಕು. ಆದರೆ ಈ ಕಾಂಗ್ರೆಸ್ ತಮ್ಮ ಪಕ್ಷದವರ ಬಣ್ಣ ಬಯಲಾಗುತ್ತದೆಯೆಂದು ಈ ರೀತಿ ದಾಖಲೆ ಇಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಕೆಂಡಕಾರಿದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕಾಂಗ್ರೆಸ್ ನೀಡಿದ ಎಲ್ಲಾ ದಾಖಲೆಗಳು ಹಾಗೂ ದೂರುಗಳು ಇವೆಲ್ಲವನ್ನೂ ಸಿಐಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದ ತನಿಖೆ ವಿಚಾರದಲ್ಲಿ ಸರ್ಕಾರವು ನಿಷ್ಪಕ್ಷಪಾತವಾಗಿ ವರ್ತಿಸುತ್ತಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಧಿಕಾರಿ ಹಾಗೂ ರಾಜಕೀಯ ನಾಯಕರನ್ನು ನಾವು ಬಂಧಿಸುತ್ತೇವೆ ಎಂದು ಹೇಳಿದರು.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ಹಿಟ್ & ರನ್ ಮಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಪಿಎಸ್ಐ ಹಾಗೂ ಪಿಯುಸಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಆದರೆ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿತ್ತು. ಈಗ ಕೂಡ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕೆಲ ಕಾಂಗ್ರೆಸ್ ನಾಯಕರೇ ಬಂಧನಕ್ಕೊಳಗಾಗಿದ್ದಾರೆ. ಇದರಿಂದ ಎಲ್ಲಿ ತಮ್ಮ ಬಣ್ಣ ಬಯಲಾಗುತ್ತದೆ ಎಂದು ಹೆದರಿ ಇವರೆಲ್ಲ ಬಿಜೆಪಿ ನಾಯಕರ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನು ಓದಿ : Jio new plans : ಜಿಯೋದಲ್ಲಿ 333 ರೂ Plan : 3 ತಿಂಗಳ ಅನಿಯಮಿತ ಡೇಟಾ ಮತ್ತು ಕರೆ
ಇದನ್ನೂ ಓದಿ : MS Dhoni Breaks Silence : ಸ್ಪೂನ್ ಫೀಡಿಂಗ್ ನಾಯಕನಿಗೆ ಸಹಾಯವಾಗೋದಿಲ್ಲ : ರವೀಂದ್ರ ಜಡೇಜಾ ವಿಚಾರದಲ್ಲಿ ಮೌನ ಮುರಿದ ಧೋನಿ
chief minister basavaraj bommai reaction about psi scam