ಬೆಳಗಾವಿ: ಕೊರೊನಾ ವೈರಸ್ ಸೋಂಕಿನ ಅಬ್ಬರದ ನಡುವಲ್ಲೇ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಸಿಎಂ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ.
ಬೆಳಗಾವಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಾಸಗಿ ಹೋಟೆಲ್ ಗೆ ಆಗಮಿಸಿದ್ದರು. ಈ ವೇಳೆಯಲ್ಲಿ ಅವರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿದ ವೇಳೆಯಲ್ಲಿ ಜ್ವರ ಇರುವುದು ಕಂಡುಬಂದಿದೆ.
ಕೆಎಲ್‍ಇ ಆಸ್ಪತ್ರೆಯ ವೈದ್ಯರಾದ ಮಾದವಪ್ರಭು, ಸಂತೋಷ ಪಾಟೀಲ್ ಅವರನ್ನು ಒಳಗೊಂಡ ವೈದ್ಯರ ತಂಡ ಖಾಸಗಿ ಹೋಟೆಲ್ ಗೆ ಆಗಮಿಸಿ ಬಿಎಸ್‍ವೈ ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ.