ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ಸಿಎಂ ಯಡಿಯೂರಪ್ಪ ಅವರಿಗೂ ತಟ್ಟಿದೆ. ಖುದ್ದಿ ಯಡಿಯೂರಪ್ಪ ಅವರೇ ತನಗೆ ಕೊವೀಡ್ -19 ಪಾಸಿಟಿವ್ ಬಂದಿರುವ ಕುರಿತು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಚಿಕಿತ್ಸೆಗಾಗಿ ಎಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಸಿಎಂ ಈಗ ದಾಖಲಾಗಿದ್ದಾರೆ. ನಾನು ಆರೋಗ್ಯವಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕ ಎಂದು ಸಿಎಂ ತಿಳಿಸಿದ್ದಾರೆ. ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವರ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು.