cm asavaraj bommai : ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿಎಂ ಅಸ್ತು : ಬಿಎಸ್​ವೈ ಆಪ್ತ ಬಣದವರಿಗೆ ಕೊಕ್​​

ಬೆಂಗಳೂರು : cm asavaraj bommai : ಬಿ.ಎಸ್​ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ಎಲ್ಲಾ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕೊಕ್​ ನೀಡಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ನಡೆಸಲಾಗಿದ್ದ ಕೋರ್​ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತಯ. ಆದರೆ ಬಿಎಸ್​ ಯಡಿಯೂರಪ್ಪ ಬಳಿಕ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ಏರಿ ಹಲವು ದಿನಗಳೇ ಕಳೆದಿದ್ದರೂ ಸಹ ಅದು ಸಾಧ್ಯವಾಗಿರಲಿಲ್ಲ. ಇದೀಗ ಕೋರ್​ ಕಮಿಟಿ ಸಭೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ನಿರ್ಣಯ ಕೈಗೊಂಡ ಸರಿ ಸುಮಾರು 1 ವರ್ಷಗಳ ಬಳಿಕ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.


ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದಾಗ ಭಾರೀ ವಿವಾದ ಏರ್ಪಟ್ಟಿತ್ತು. ಪಕ್ಷದ ಹಳೆಯ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ವಿಜಯೇಂದ್ರ ಆಪ್ತ ಬಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ. ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಹೀಗೆ ನಾನಾ ಆಪಾದನೆಗಳು ಯಡಿಯೂರಪ್ಪ ವಿರುದ್ಧ ಕೇಳಿ ಬಂದಿತ್ತು. ಇದಾದ ಬಳಿಕ ಕೋರ್​ ಕಮಿಟಿಯ ಸಭೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಆಗಲೇಬೇಕು ಎಂದು ಡಾ. ಅಶ್ವತ್ಥ ನಾರಾಯಣ ಹಾಗೂ ಡಿ.ವಿ ಸದಾನಂದ ಗೌಡ ಅಂದು ಪಟ್ಟು ಹಿಡಿದಿದ್ದರು.


ತಮ್ಮ ವಿರುದ್ಧ ಸಾಕಾಷ್ಟು ಆಪಾದನೆಗಳು ಎದುರಾದ ಬಳಿಕ ಯಡಿಯೂರಪ್ಪ ಕೂಡ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಅಸ್ತು ಎಂದಿದ್ದರು. ಆದರೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಆಗಿರಲಿಲ್ಲ. ಆದರೆ ಇದೀಗ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ನೇತೃತ್ವದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಹೊಸ ಪಟ್ಟಿ ಸಿದ್ಧಗೊಂಡಿದ್ದು ಯಡಿಯೂರಪ್ಪ ಆಪ್ತ ಬಣದ ಎಲ್ಲರಿಗೂ ಕೊಕ್​ ನೀಡಲಾಗಿದೆ.


ನಿಗಮ ಮಂಡಳಿಯ ಪ್ರಸ್ತುತ ಎಲ್ಲಾ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ವಹಿಸಿರುವ ಶಾಸಕರು ಮಾತ್ರ ತಮ್ಮ ಸ್ಥಾನದಲ್ಲಿಯೇ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ನೂತನ ಅಧ್ಯಕ್ಷರ ಪಟ್ಟಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದೇ ಬಿಡುಗಡೆಗೊಳಿಸಲಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : John Abraham Mike : ಚೊಚ್ಚಲ ಮಲಯಾಳಂ “ಮೈಕ್” ಸಿನಿಮಾದಲ್ಲಿ ಜಾನ್ಅಬ್ರಹಾಂ

ಇದನ್ನೂ ಓದಿ : Mallikarjun Kharge Next CM : ಕರ್ನಾಟಕದಲ್ಲಿ ಬಾರಿ ಅತಂತ್ರ ವಿಧಾನಸಭೆ : ಜೆಡಿಎಸ್‌ ಜೊತೆ ಸಂಘರ್ಷ ಬೇಡ ಎಂದ ಹೈಕಮಾಂಡ್, ಖರ್ಗೆ ಸಿಎಂ ?

cm asavaraj bommai agreed to change the presidents of boards and corporation

Comments are closed.