ಭಾನುವಾರ, ಏಪ್ರಿಲ್ 27, 2025
HomepoliticsMekedatu issue : ಮೇಕೆದಾಟು ವಿಚಾರವಾಗಿ ತಮಿಳುನಾಡಿನ ನಿರ್ಣಯ ಖಂಡಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ

Mekedatu issue : ಮೇಕೆದಾಟು ವಿಚಾರವಾಗಿ ತಮಿಳುನಾಡಿನ ನಿರ್ಣಯ ಖಂಡಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ

- Advertisement -

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯನ್ನು ಹಾಗೂ ರಾಜ್ಯದಲ್ಲಿ ಮೇಕೆದಾಡು ಯೋಜನೆಗಾಗಿ (Mekedatu issue) ಸೃಷ್ಟಿಯಾಗಿರುವ‌ ರಾಜಕೀಯ ಮಹತ್ವ ಅರಿತ ರಾಜ್ಯ ಸರ್ಕಾರ ಕೊನೆಗೂ ಮೇಕೆದಾಟು ಯೋಜನೆಯನ್ನು ಜಾರಿಗೆ ತರಲು ಪ್ರಯತ್ನ ಆರಂಭಿಸಿದೆ. ಮೇಕೆದಾಟು ಯೋಜನೆ ಒತ್ತಾಯಿಸಿ ಸರ್ಕಾರದಿಂದ ಸದನದಲ್ಲಿ ನಿರ್ಣಯ ಮಂಡನೆಯಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ಸದನದಲ್ಲೇ ಖಂಡನಾ ನಿರ್ಣಯ ಮಂಡಿಸಲಾಗಿತ್ತು. ಅಲ್ಲದೇ ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕದ ಮೇಕೆದಾಟು ಯೋಜನೆ ವಿರೋಧಿಸಿದ್ದರು. ಇದಕ್ಕೆ ಉತ್ತರ ಎಂಬಂತೆ ಈಗ ಸದನದಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ (CM Basavaraj Bommai ) ನಿರ್ಣಯ ಮಂಡಿಸಿದ್ದಾರೆ.

ಮೇಕೆದಾಟು (Mekedatu issue) ವಿಚಾರವಾಗಿ ಅಧಿಕೃತ ನಿರ್ಣಯ

  1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21 03, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ.
  2. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 30 ನೀರಿನ ಪ್ರಮಾಣವನ್ನು ಖಚಿತಪಡಿಸುವಂತ ನಿಗದಿಪಡಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 consumptive use) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾಧಕ ಅಥವಾ ಹಾನಿಯಾಗುವುದಿಲ್ಲ.
  3. ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ.
  4. ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ PSP, ಸಿಲ್ಲಹಳ್ಳಿ PSP, ಹೊಗೇನಕಲ್ ಹಂತ-1, ಕಾವೇರಿ (ಹಟ್ಟಲೆ) ವೈದ್ಯ ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ
  5. ಪೆನಿನ್ಸುಲರ್ ರಿವಲ್ ಡೆವಲಪ್‌ಮೆಂಟ್ (Peninsular River Development) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ ನನ್ನಾ‌-ಕಾವೇರಿ-ಮೈಗೆ ಗುಂಡಾರ್ ಯೋಜನೆಗೆ ತಿರುವುಗೊಳಿಸುವ ವಿಕೃತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು.
  6. ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಅದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ ರಾಜ್ಯದ ಒಪ್ಪಿಗೆಯನ್ನು ಹೋರದೆ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ.
  7. ಕೇಂದ್ರ ಜಲ ಆಯೋಗವು ಮೇಲೆದಾಟು ಯೋಜನೆಯ ವಿಸ್ತತ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿಯನ್ನು ಪಡೆಯಲು ToR ಅನ್ನು ಅನುಮೋದಿಸುವಂತೆ ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ.

Mekedatu issue : ಸದನವು ಸರ್ವಾನುಮತದಿಂದ ಈ ಮುಂದಿನಂತೆ ನಿರ್ಣಯಿಸುತ್ತದೆ:

  • ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ.
  • ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ (Central Water Commission) .ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯ (MoEF) ವನ್ನು ಒತ್ತಾಯಿಸುತ್ತದೆ.
  • ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೆ-ಗುಂಡಾರ್ ಜೋಡಣೆ ಯೋಜನೆಯ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ. ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ‌.

ಇದನ್ನೂ ಓದಿ : ತಮಿಳುನಾಡು ವಿರುದ್ಧ ಕರ್ನಾಟಕ ಗರಂ : ಮೇಕೆದಾಟು ಜಾರಿ ಸಿದ್ಧ ಎಂದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : Amit Shah : ಮತ್ತೆ ಜೀವ ಪಡೆದುಕೊಂಡ ಸಂಪುಟ ಸರ್ಕಸ್ : ಎಪ್ರಿಲ್‌ 1ರಂದು ಕರ್ನಾಟಕಕ್ಕೆ ಅಮಿತ್ ಶಾ

CM Basavaraj Bommai condemns Mekedatu issue Tamil Nadu decision

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular