cm bommai : ರಾಜ್ಯದಲ್ಲಿ ಮತ್ತೆ ಗರಿಗೆದರಿದ ಸಂಪುಟ ವಿಸ್ತರಣೆ ಚಟುವಟಿಕೆ : ಮಹತ್ವದ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : cm bommai : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ 8 ತಿಂಗಳು ಬಾಕಿ ಉಳಿದಿದ್ದರೂ ಸಹ ರಾಜ್ಯದಲ್ಲಿ ಸಂಪುಟ ವಿಸ್ತರಣೆ (discuss cabinet expansion) ಬಗೆಗಿನ ಚರ್ಚೆ ಮಾತ್ರ ಕಡಿಮೆಯಾಗಿಲ್ಲ. ಬಸವರಾಜ ಬೊಮ್ಮಾಯಿ ಯಾವಾಗ ಸಂಪುಟ ವಿಸ್ತರಣೆ ಮಾಡ್ತಾರೆ, ನಮಗೆ ಸಚಿವ ಸ್ಥಾನ ಯಾವಾಗ ಸಿಗುತ್ತೆ ಅಂತಾ ಅನೇಕ ಶಾಸಕರೂ ಈಗಲೂ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಇಂತಹ ನಾಯಕರಿಗೆ ಸಮಾಧಾನಕಾರ ಸುದ್ದಿಯೊಂದನ್ನು ನೀಡಿದ್ದಾರೆ. ಜುಲೈ 24ರಂದು ದೆಹಲಿ ಪ್ರವಾಸಕ್ಕೆ ತೆರಳುತ್ತಿದ್ದ ಅಂದೇ ಪಕ್ಷದ ವರಿಷ್ಠರ ಜೊತೆಯಲ್ಲಿ ಸಂಪುಟ ವಿಸ್ತರಣೆ ಕುರಿತಂದೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನೂತನ ರಾಷ್ಟ್ರಪತಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜುಲೈ 24ರಂದೇ ದೆಹಲಿಗೆ ತೆರಳಲಿದ್ದೇನೆ. ವಿವಿಧ ಇಲಾಖೆಗಳ ನಿಯೋಗಗಳೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ. ಜುಲೈ 25 ಹಾಗೂ 26ರಂದೂ ನಾನು ದೆಹಲಿಯಲ್ಲಿಯೇ ಇರಲಿದ್ದೇನೆ. ಈ ಅವಧಿಯಲ್ಲಿ ಹೈಕಮಾಂಡ್​ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಉತ್ಸಾಹ ತೋರಿದಲ್ಲಿ ಖಂಡಿತವಾಗಿಯೂ ನಾನು ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಪ್ರಮಾಣ ವಚನ ಕಾರ್ಯಕ್ರಮದ ಜೊತೆಯಲ್ಲಿ ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿಯೂ ಚರ್ಚೆ ನಡೆಸಬೇಕಾಗಿರೋದ್ರಿಂದ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದುಕೊಂಡು ಹೋಗ್ತಿದ್ದೇನೆ ಎಂದು ಹೇಳಿದರು. ಇದೇ ವೇಳೆ ಬಜೆಟ್​ನಲ್ಲಿ ಘೋಷಣೆ ಮಾಡಿದ ಯೋಜನೆಗಳ ಬಗ್ಗೆಯೂ ಮಾತನಾಡಿದ ಅವರು ಅನೇಕ ಯೋಜನೆಗಳಿಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಉಳಿದ ಯೋಜನೆಗಳಿಗೆ ಅನುಮೋದನೆ ಸಿಗಲಿದೆ. ಬಜೆಟ್​ನಲ್ಲಿ ಘೋಷಣೆಯಾದ ಎಲ್ಲಾ ಯೋಜನೆಗಳು ಸಕಾಲದಲ್ಲಿ ಅನುಷ್ಠಾನಗೊಳ್ಳಲು ಸೂಕ್ತ ಕ್ರಮ ಕೈಗೊಳ್ತಿದ್ದೇವೆ ಎಂದು ಹೇಳಿದರು.

ಇದನ್ನು ಓದಿ : ಮಕ್ಕಳ ಕೈಗೆ ಚಾಕಲೇಟ್‌ ನೀಡುವ ಮುನ್ನ ಹುಷಾರ್‌ : ಬೈಂದೂರಲ್ಲಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಶಾಲಾ ಬಾಲಕಿ ಸಾವು

ಇದನ್ನೂ ಓದಿ : Virat Kohli form : ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳಲು ಬಿಸಿಸಿಐ ಬಳಿಯಿದೆ ಜಬರ್ದಸ್ತ್ ಪ್ಲಾನ್

ಇದನ್ನೂ ಓದಿ : Aishwarya Rai Pregnant : 2ನೇ ಮಗುವಿಗೆ ತಾಯಿಯಾಗ್ತಿದ್ದಾರಾ ಐಶ್ವರ್ಯಾ ರೈ ಬಚ್ಛನ್​ : ಅನುಮಾನ ಹುಟ್ಟಿಸಿದ ವೈರಲ್​ ವಿಡಿಯೋ

cm bommai to discuss cabinet expansion during delhi visit

Comments are closed.