Siddaramaiah; ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೌದು… ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ದೂರಿನ ಪ್ರಕಾರ ಮೈಸೂರಿನ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ . ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ದೂರಿನಂತೆ ಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಒಂದು ವೇಳೆ ಎಫ್ ಐ ಆರ್ ದಾಖಲಾದರೆ ಸಿದ್ದರಾಮಯ್ಯ ಎ1 ಆರೋಪಿ, ಎ2 ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಎ3 ಸಿದ್ದರಾಮಯ್ಯ ಅವರ ಪತ್ನಿ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ 4 ಜಮೀನು ಮಾರಾಟದಾರ ದೇವರಾಜು ಆಗಲಿದ್ದಾರೆ.

ಇನ್ನು ತಮ್ಮ ವಿರುದ್ಧ ಇಂದು ಸಬರು ದಾಖಲಾಗುತ್ತೆ ಅನ್ನೋ ಸೂಚನೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಕ್ಕಿದ್ದು , ಹೀಗಾಗಿ ಈ ಕೇಸ್ ನಿಂದ ಹೇಗೆ ಪಾರಾಗ್ಬೇಕು ಅನ್ನೋ ಬಗ್ಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾನೂನು ತಜ್ಞರು ಹಾಗೂ ಹಿರಿಯ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮೀಟಿಂಗ್ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಕಾನೂನು ತಜ್ಞರು, ಹಿರಿಯ ಸಚಿವರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ಸಭೆಯಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಸಚಿವರಾದ ಹೆಚ್.ಕೆ.ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಅಡ್ವೊಕೇಟ್ ಜನರಲ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಕ್ತ ತನಿಖೆಗೆ ಸಿಬಿಐಗೆ ಇದ್ದ ಅವಕಾಶ ರದ್ದು; ಅಧಿಸೂಚನೆ ವಾಪಸ್ ಪಡೆದ ರಾಜ್ಯ ಸರ್ಕಾರ