CM Siddaramaiah : ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ (CM Siddaramaiah) ಬಂದಿದೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆಮಿಷವೊಡ್ಡಿದೆ ಅನ್ನೋ ಆರೋಪವಿದೆ. ಇದೇ ವಿಚಾರದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಆಗ್ರಹಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 123 (1) ರ ಅಡಿಯಲ್ಲಿ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಆಮಿಷವೊಡ್ಡುವಂತಿಲ್ಲ. ಆದರೆ ಕಾಂಗ್ರೆಸ್‌ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್‌ ವಿತರಿಸಿ ಆಮಿಷವೊಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : B. S. Yediyurappa : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಕೃಷಿ ವಿವಿ ವತಿಯಿಂದ ಗೌರವ ಡಾಕ್ಟರೇಟ್‌ ಪ್ರಧಾನ

ಇದನ್ನೂ ಓದಿ : Gruha Lakshmi Scheme : ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮತದಾರರನ್ನು ಸೆಳೆಯಲು ನೀಡಿರುವ ಗ್ಯಾರಂಟಿ ಕಾರ್ಡ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಸಹಿ ಒಳಗೊಂಡಿದೆ. ರಾಜ್ಯದಾದ್ಯಂತ ಈ ಗ್ಯಾರಂಟಿ ಕಾರ್ಡ್‌ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಅರ್ಜಿಯ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿಕೆ ಮಾಡಿದೆ.

CM Siddaramaiah petitioned the High Court seeking MLA seat Asindhu

Comments are closed.