CM Siddaramaiah : ಬಜೆಟ್‌ ಮಂಡನೆಯಲ್ಲೂ ಸಿದ್ದರಾಮಯ್ಯ ದಾಖಲೆ : ರಾಜ್ಯದಲ್ಲಿ ಯಾರು ಎಷ್ಟು ಬಾರಿ ಬಜೆಟ್‌ ಮಂಡಿಸಿದ್ದಾರೆ ಗೊತ್ತಾ ?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) 14ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್‌ ಮಂಡನೆ ಮಾಡಿರುವ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಮಾಜಿಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್‌ ಮಂಡನೆ ಮಾಡಿದ್ದ ದಾಖಲೆಯನ್ನು ಹೊಂದಿದ್ದಾರೆ. ದೇಶದಲ್ಲಿಯೇ ಅತೀ ಹೆಚ್ಚು ಬಾರಿ ಬಜೆಟ್‌ ಮಂಡನೆ ಮಾಡಿರುವ ಖ್ಯಾತಿ ಕರ್ನಾಟಕದ ಮಾಜಿ ರಾಜ್ಯಪಾಲರಾದ ವಜುಬಾಯಿ ವಾಲಾ ಅವರಿಗೆ ಸಲ್ಲುತ್ತದೆ. ಅವರು ಗುಜರಾತ್‌ ವಿಧಾನಸಭೆಯಲ್ಲಿ ಒಟ್ಟು 18 ಬಾರಿ ಬಜೆಟ್‌ ಮಂಡನೆ ಮಾಡಿದ್ದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ಅವಧಿಯನ್ನು ಪೂರ್ಣಗೊಳಿಸಿದ ಎರಡನೇ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ಸಿಎಂ ಆಗಿದ್ದ ವೇಳೆಯಲ್ಲಿ ಐದು ಬಾರಿ ಬಜೆಟ್‌ ಮಂಡಿಸಿದ್ದರು. ಇದೀಗ ಆರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬಜೆಟ್‌ ಮಂಡಿಸಲಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಅವರು 7 ಬಾರಿ ಬಜೆಟ್‌ ಮಂಡನೆ ಮಾಡಿದ್ದರು. ಈ ಹಿಂದೆ 2005-07 ರ ವರೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ, 1995-2000ನೇ ಇಸವಿಯಲ್ಲಿ ಜೆಡಿಎಸ್‌ ಸರಕಾರದಲ್ಲಿ ಅವರು ಬಜೆಟ್‌ ಮಂಡನೆ ಮಾಡಿದ್ದರು.

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಗೊಂಡಿರುವ ಅವಿಭಜಿತ ಮೈಸೂರು ಜಿಲ್ಲೆ ಒಟ್ಟು ನಾಲ್ವರು ಹಣಕಾಸು ಸಚಿವರನ್ನು ನೀಡಿದ್ದು, ಇದುವರೆಗೆ ಒಟ್ಟು 29 ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಪಾತ್ರವಾಗಿದೆ. ಬಿ.ಎಸ್.ಯಡಿಯೂರಪ್ಪ, ಎಸ್.ಎಂ.ಕೃಷ್ಣ ಹಾಗೂ ಟಿ. ಮರಿಯಪ್ಪ ಅತೀ ಹೆಚ್ಚು ಬಜೆಟ್‌ ಮಂಡನೆ ಮಾಡಿರುವ ಖ್ಯಾತಿಗೆ ಪಾತ್ರರಾಗಿದ್ದರು.

ಸಿದ್ದು ಬಜೆಟ್‌ ಮೇಲೆ ಜನರ ಏನಿದೆ ನಿರೀಕ್ಷೆ ?

ಕಳೆದ ಬಜೆಟ್‌ನಲ್ಲಿ ರಾಜ್ಯದ ಕರಾವಳಿ ಭಾಗಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದರೂ ಕೂಡ ಜಾರಿಯಾಗಿಲ್ಲ. ಪ್ರಮುಖವಾಗಿ ಮೀನುಗಾರ ಮಹಿಳೆಯರಿಗೆ 5 ಲಕ್ಷ ರೂಪಾಯಿ ಬಡ್ಡಿರಹಿತ ಸಾಲ, ಮೀನುಗಾರರ ವಿಮೆ 10 ಲಕ್ಷಕ್ಕೆ ಏರಿಕೆ, ಹಡಗುಗಳ ಖರೀದಿಗೆ 25 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ, ಅಇಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ೫೦ ಕೋಟಿ ರೂಪಾಯಿ ಮೀಸಲು. ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ, ಕರಾವಳಿಯ ಬಂದರುಗಳ ಅಭಿವೃದ್ದಿ. ಕರಾವಳಿ ಪ್ರವಾಸೋದ್ಯಮಕ್ಕೆ ಪೂರಕ ಯೋಜನೆ, ಕರಾವಳಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬ್ರಹ್ಮಾವರದಲ್ಲಿ ಕೃಷಿ ಕಾಲೇಜು, ಕರಾವಳಿ ಪ್ರಾಧಿಕಾರ ಮೇಲ್ದರ್ಜೆಗೆ ಸೇರಿದಂತೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನ ಅಭಿವೃದ್ದಿ ಹಲವು ಯೋಜನೆಗಳು ಜಾರಿ ಆಗುವ ಕುರಿತು ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಗುಂಡಿ ಮುಕ್ತ ರಸ್ತೆ, ರಾಜಕಾಲುವೆ ಸಮಸ್ಯೆ, ತ್ಯಾಜ್ಯ ವಿಲೇವಾರಿ, ವಾಹನ ಸಂಚಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಯೋಜನೆ ಜಾರಿಯಾಗುವ ಕುರಿತು ರಾಜ್ಯ ಬಜೆಟ್‌ನ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಮೈಸೂರು ಕರ್ನಾಟಕದ ಭಾಗದಲ್ಲಿಯೂ ಹಲವು ನಿರೀಕ್ಷೆಗಳಿವೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ, ಆನೆಧಾಮ ಸ್ಥಾಪನೆ, ಮಂಡ್ಯದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಚಾಮರಾಜನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ, ಗುಣಮಟ್ಟದ ಶಿಕ್ಷಣ ಮತ್ತು ಶಾಲೆಗಳ ಅಭಿವೃದ್ಧಿಗೆ ಅನುದಾನದ ಅವಶ್ಯಕತೆ, ಶ್ರೀರಂಗಪಟ್ಟಣ ಮೆಕ್ಸಿಕೋ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಸ್ಮಾರಕಗಳ ಸಂರಕ್ಷಣೆ, ಚಿಕ್ಕಮಗಳೂರು ಹಾಗೂ ಕೊಡಗು ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಕುರಿತು ನಿರೀಕ್ಷೆಗಳಿವೆ.

ಇದನ್ನೂ ಓದಿ : Karnataka Budget 2023 : ಇಂದು ಕರ್ನಾಟಕ ರಾಜ್ಯ ಬಜೆಟ್‌, ಸಿಎಂ ಸಿದ್ದರಾಮಯ್ಯ ಮೇಲೆ ಜನರ ನಿರೀಕ್ಷೆಗಳೇನು ?

ಇದನ್ನೂ ಓದಿ : BS Yediyurappa : ಕರ್ನಾಟಕ ವಿರೋಧ ಪಕ್ಷದ ನಾಯಕನ ಆಯ್ಕೆ ಕೇಂದ್ರದ ನಿರ್ಧಾರ ಎಂದ ಯಡಿಯೂರಪ್ಪ

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 70 ಸಾವಿರ ಕೋಟಿ ರೂಪಾಯಿ ಮೀಸಲು. ತೊಗರಿ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ., ಪ್ರತ್ಯೇಕ ಕೈಗಾರಿಕಾ ನೀತಿ ಜತೆಗೆ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗೆ ಅನುದಾನದ ಸೌಲಭ್ಯ, ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಪ್ರದೇಶಾಭಿವೃದ್ದಿ ಮಂಡಳಿ, ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಆರಂಭಕ್ಕೆ ಜಾಗ ಮಂಜೂರು, ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿ, ಕೈಗಾರಿಕಾ ಕಾರಿಡಾರ್‌, ಚಿತ್ರದುರ್ಗದ ಅಭಿವೃದ್ದಿಗೆ ಪ್ರತ್ಯೇಕ ಯೋಜನೆ ಜಾರಿಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ಜನರು ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಕೃಷಿ, ಕೈಗಾರಿಕೆ, ಉದ್ಯೋಗ, ಇಂಡಸ್ಟ್ರೀಯಲ್‌ ಕಾರಿಡಾರ್‌ ಸೇರಿದಂತೆ ಹಲವು ನಿರೀಕ್ಷೆಗಳಿವೆ.

CM Siddaramaiah: Siddaramaiah’s record in budget presentation: Do you know how many times who has presented the budget in the state?

Comments are closed.