ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ : ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್‌ ಬಗ್ಗೆ ಬಿಎಸ್‌ವೈ ಹೇಳಿದ್ದೇನು ಗೊತ್ತಾ ..!!

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನನಗೆ ಹೈಕಮಾಂಡ್‌ ಯಾವುದೇ ರೀತಿಯಲ್ಲಿಯೂ ಒತ್ತಡವನ್ನು ಹೇರಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜಭನವಕ್ಕೆ ತೆರಳಿ ವಾಪಾಸಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯ ಹುದ್ದೆಗೆ ಪಕ್ಷದ ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಅಲ್ಲದೇ ರಾಜ್ಯಪಾಲರು ಕೂಡ ತನ್ನ ರಾಜೀನಾಮೆಯನ್ನು ಸ್ವೀಕಾರ ಮಾಡಿದ್ದಾರೆ ಎಂದಿದ್ದಾರೆ. ದೇಶದಲ್ಲಿ ೭೫ ವರ್ಷ ಮೇಲ್ಪಟ್ಟವರಿಗೆ ಸಿಎಂ ಆಗಿ ಮುಂದುವರಿಯಲು ಯಾರಿಗೂ ಅವಕಾಶವನ್ನು ಕೊಟ್ಟಿಲ್ಲ. ಆದ್ರೆ ಮೋದಿ, ಅಮಿತ್‌ ಶಾ ಹಾಗೂ ನಡ್ಡಾ ಅವರು ನನ್ನ ಮೇಲೆ ವಿಶೇಷವಾದ ಅಭಿಮಾನವನ್ನು ಇಟ್ಟು ಎರಡು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಸಾಧನಾ ಸಮಾವೇಶದಲ್ಲಿ ಕಣ್ಣೀರಿಟ್ಟ ಯಡಿಯೂರಪ್ಪ

ನಾನು ಎರಡು ತಿಂಗಳ ಹಿಂದೆ ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ಆದ್ರೆ ಸರಕಾರಕ್ಕೆ ಎರಡು ವರ್ಷ ತುಂಬಿದ ಸಂದರಭದಲ್ಲಿ ರಾಜೀನಾಮೆ ನೀಡುವುದು ಸೂಕ್ತ ಅನ್ನೋ ನಿಟ್ಟಿನಲ್ಲಿ ರಾಜೀನಾಮೆ ಸಲ್ಲಿಸಿದ್ದೇನೆ. ಅದೇ ರೀತಿಯಲ್ಲಿ ರಾಜ್ಯದ ಜನತೆ ನಾಲು ಬಾರಿ ಸಿಎಂ ಆಗಲು ಅವಕಾಶವನ್ನು ಕಲ್ಪಿಸಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಅದ್ರಲ್ಲೂ ಶಿಕಾರಿಪುರದ ಜನತೆ ನನ್ನನ್ನು ಏಳು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ನನ್ನ ಜೀವನದಲ್ಲಿ ಶಿಕಾರಿಪುರದ ಜನತೆಯನ್ನು ಮರೆಯಲು ಸಾಧ್ಯವಿಲ್ಲ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಬೂಕನಕೆರೆ TO ವಿಧಾನಸೌಧ : ನಿಂಬೆಹಣ್ಣು ವ್ಯಾಪಾರಿ ಮಗ, ರೈಸ್ ಮಿಲ್ ರೈಟರ್ ಯಡಿಯೂರಪ್ಪ ಸಿಎಂ ಆಗಿದ್ದು ಹೇಗೆ ಗೊತ್ತಾ ?

ದೇಶದ ಇತಿಹಾಸದಲ್ಲಿ ಮಠಾಧೀಶರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲವನ್ನು ಕೊಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ಮಠಾಧೀಶರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಯಾರೇ ಮುಖ್ಯಮಂತ್ರಿಯಾದರೂ ಕೂಡ ಅವರಿಗೂ ನಿಮ್ಮ ಬೆಂಬಲವನ್ನು ನೀಡಬೇಕೆ ಎಂದಿದ್ದಾರೆ. ಅಲ್ಲದೇ ನನ್ನ ರಾಜೀನಾಮೆಗೆ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜೆಪಿ ನಡ್ಡಾ ಅವರು ಒತ್ತಾಯ ಹೇರಿಲ್ಲ ಎಂದಿದ್ದಾರೆ.

Comments are closed.