ವಿಜಯೇಂದ್ರ ದೆಹಲಿ ಭೇಟಿ ಬೆನ್ನಲ್ಲೇ ರಾಜೀನಾಮೆ ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ರಾಜ್ಯದಲ್ಲಿ ಸಮಯಗಳಿಂದಲೂ ಮಾತುಗಳು ಕೇಳಿಬರುತ್ತಿದೆ. ಇದೀಗ ಸಿಎಂ ಪುತ್ರ ವಿಜಯೇಂದ್ರ ದೆಹಲಿ ಭೇಟಿಯ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ರಾಜೀನಾಮೆಯ ಕುರಿತು ಮಾತನಾಡಿದ್ದಾರೆ. ಅದ್ರಲ್ಲೂ ಹೈಕಮಾಂಡ್ ಬಯಸಿದ್ರೆ ರಾಜೀನಾಮೆ ನೀಡೋದಾಗಿಯೂ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಅವರ 39ನೇ ಪುಣ್ಯತಿಥಿಯ ಹಿನ್ನೆಲೆಯಲ್ಲಿಂದು ವಿಧಾನಸೌದದಲ್ಲಿ ಯಡಿಯೂರಪ್ಪ ದೇವರಾಜು ಅರಸು ಅವರ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿದ್ರು, ನಂತರ ಮಾತನಾಡಿದ ಅವರು, ಬಿಜೆಪಿ ಪಕ್ಷದ ವರಿಷ್ಠರು ನನ್ನ ಮೇಳೆ ವಿಶ್ವಾಸವಿಟ್ಟು ಅಧಿಕಾರ ಕೊಟ್ಟಿದ್ದಾರೆ. ಎಲ್ಲಿಯವರೆಗೆ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ನಾನು ಸಿಎಂ ಆಗಿ ಮುಂದುವರಿಯುತ್ತೇನೆ ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರಾದ ಯೋಗೀಶ್ವರ್, ಅರವಿಂದ ಬೆಲ್ಲದ್ ಅವರ ನಾಯಕತ್ವದ ವಿಚಾರವಾಗಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸದ್ಯ ಪರ್ಯಾಯ ನಾಯಕರಿಲ್ಲ ಅನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಅಲ್ಲದೇ ಬಿಜೆಪಿಯಲ್ಲಿ ಪರ್ಯಾಯ ನಾಯಕರು ಇಲ್ಲ ಎನ್ನುವುದನ್ನು ನಾನು ಒಪ್ಪುವುದಲ್ಲ. ರಾಜ್ಯ ಹಾಗೂ ದೇಶದಲ್ಲಿಯೂ ಪರ್ಯಾಯ ನಾಯಕರಿದ್ದಾರೆ ಎಂದಿದ್ದಾರೆ.

ಸಿಎಂ ಬದಲಾವಣೆಯ ಗುಸು ಗುಸು ನಡುವಲ್ಲೇ ಇದೀಗ ಸಿಎಂ ಯಡಿಯೂರಪ್ಪ ನೀಡಿರುವ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಪರೋಕ್ಷವಾಗಿ ರಾಜೀನಾಮೆಯ ಕುರಿತು ಯಡಿಯೂರಪ್ಪ ಪ್ರಸ್ತಾಪ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Comments are closed.