HD Kumaraswamy : SSC ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸಿ: ಕೇಂದ್ರಕ್ಕೆ HDK ಆಗ್ರಹ

ಬೆಂಗಳೂರು : (SSC exam in Kannada) ಹಿಂದಿ ಹೇರಿಕೆ ಬಗ್ಗೆ ಚರ್ಚೆ ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ಎಸ್ ಎಸ್ ಸಿ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಆಗ್ರಹಿಸಿದ್ದಾರೆ. ಅಲ್ಲದೇ ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರಕಾರ ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರೋ ಎಚ್.ಡಿ.ಕುಮಾರಸ್ವಾಮಿ(HD Kumaraswamy), ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಉದ್ಯೋಗದ ಕೊರತೆ ಇದೆ ಎನ್ನುವುದಕ್ಕಿಂತ ಕರ್ನಾಟಕದ ಉದ್ಯೋಗ ಸೃಷ್ಟಿಯಲ್ಲಿ ಬಹುಪಾಲನ್ನು ಉತ್ತರ ಭಾರತದ ಜನರು ಪಡೆದುಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ಪ್ರತಿಭಾನ್ವಿತರಿದ್ದರೂ ಕೂಡ ಪರೀಕ್ಷೆಯ ಸಮಸ್ಯೆಯಿಂದ ವಿದ್ಯಾರ್ಥಿಗಳು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ.ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : Assembly Election 2022 : ಕಾಂಗ್ರೆಸ್ ಎದುರಿಸೋದ್ರಲ್ಲಿ ಎಡವಿದ್ಯಾ ಸರ್ಕಾರ: ಕಾರ್ಯಕಾರಿಣಿ ಯಲ್ಲಿ ಮಹತ್ವದ ಚರ್ಚೆ‌

ಇದನ್ನೂ ಓದಿ : Bharat Jodo Yatra : ಮರಿ ಆನೆಗಾಗಿ ಮಿಡಿದ ರಾಹುಲ್ ಗಾಂಧಿ: ಚಿಕಿತ್ಸೆ ಕೊಡಿಸುವಂತೆ ಸಿಎಂ ಗೆ ಪತ್ರ

ಇದನ್ನೂ ಓದಿ : Assembly Election 2022 : ಕಾಂಗ್ರೆಸ್ ಎದುರಿಸೋದ್ರಲ್ಲಿ ಎಡವಿದ್ಯಾ ಸರ್ಕಾರ: ಕಾರ್ಯಕಾರಿಣಿ ಯಲ್ಲಿ ಮಹತ್ವದ ಚರ್ಚೆ‌

ಇತ್ತೀಚಿಗಷ್ಟೇ ಕರ್ನಾಟಕದಲ್ಲಿ ಹಿಂದಿ ಹೇರಿಕೆ ಬಗ್ಗೆಯೂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿನಾಚರಣೆ ಬೇಡ ಎಂದಿದ್ದರು. ಈಗ ಪರೀಕ್ಷಾ ವಿಚಾರದಲ್ಲೂ ಕುಮಾರಸ್ವಾಮಿ ಕನ್ನಡಿಗರ ಪರ ಧ್ವನಿ ಎತ್ತಿದ್ದಾರೆ.

Conduct SSC exam in Kannada too: HD Kumaraswamy demands to Centre

Comments are closed.