ಮೈಸೂರು : congress doing fake allegations :ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಹಾಗೂ ಕಮಿಷನ್ ದಂಧೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಗಳ ಸುರಿಮಳೆಗಳ ವಿರುದ್ಧ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರವನ್ನು ಹಿಡಿಯುವ ಆತುರದಲ್ಲಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ದಾಖಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಯಾವುದೇ ಪುರಾವೆ ಇಲ್ಲದಿದ್ದರು ಕೂಡ ಕಾಂಗ್ರೆಸ್ಸಿಗರು ಬಿಜೆಪಿ ನಾಯಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಈ ರೀತಿಯ ಕೆಲಸವನ್ನು ಮಾಡುತ್ತಿದೆ. ಆದರೆ ಈ ಎಲ್ಲಾ ಪ್ರಕರಣಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಮೈಸೂರಿನಲ್ಲಿ ಚುನಾವಣಾ ತಯಾರಿ ವಿಚಾರವಾಗಿಯೂ ಮಾತನಾಡಿದ ಅವರು, ಈ ಬಾರಿ ಮೈಸೂರಿನಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ನಾವು ಮೈಸೂರು ಭಾಗದಲ್ಲಿ ಹೆಚ್ಚೆಚ್ಚು ಜನಪರ ಕೆಲಸಗಳನ್ನು ಮಾಡಲಿದ್ದೇವೆ. ಕಾಂಗ್ರೆಸ್ಸಿಗರು ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಜನರು ಉತ್ತಮರ ಕೈಗೆ ಅಧಿಕಾರದ ಚುಕ್ಕಾಣಿಯನ್ನು ನೀಡುತ್ತಾರೆ ಎಂದು ಹೇಳಿದರು.
ಇದನ್ನು ಓದಿ : Asha Bhat : ನಾಯಕಿಯಿಂದ ಗಾಯಕಿ ಪಟ್ಟಕ್ಕೆ: ಇದು ರಾಬರ್ಟ್ ಬೆಡಗಿಯ ಹೊಸ ಕಹಾನಿ
ಇದನ್ನೂ ಓದಿ : Pooja Hegde : ಕಾಪು ಮಾರಿಗುಡಿಗೆ ರಾಧೇ ಶ್ಯಾಮ್ ಬೆಡಗಿ ಪೂಜಾ ಹೆಗ್ಡೆ : ಸೋಲಿನಿಂದ ಕಂಗೆಟ್ಟ ನಟಿಗೆ ದೇವರ ಅಭಯ
congress doing fake allegations against bjp leaders