ಪ್ರವೀಣ್‌ ನೆಟ್ಟಾರು ಮನೆಗೆ ಕಾಂಗ್ರೆಸ್‌ ನಾಯಕರ ಭೇಟಿ : ಧಿಕ್ಕಾರ ಕೂಗಿದ ಸಂಬಂಧಿಕರು

ಪುತ್ತೂರು : (Praveen Nettaru house) ಬಿಜೆಪಿ ಯುವ ಮುಖಂಡ ಪ್ರವೀನ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವಲ್ಲೇ ಕಾಂಗ್ರೆಸ್‌ ಮುಖಂಡರು ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡಿದ್ದಾರೆ. ಆದ್ರೆ ಕಾಂಗ್ರೆಸ್‌ ಮುಖಂಡರ ಭೇಟಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿರುವ ಪ್ರವೀಣ್‌ ಅವರ ಮನೆಗೆ ಭೇಟಿ ನೀಡಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವಾನ ಹೇಳುವ ವೇಳೆಯಲ್ಲಿ ಪ್ರವೀಣ್‌ ಅವರ ಚಿಕ್ಕಪ್ಪ ಜಯರಾಮ್‌ ಅವರು ಮಾತನಾಡಿದ್ದಾರೆ. ಈ ವೇಳೆಯಲ್ಲಿ ರಮಾನಾಥ ರೈ ಅವರು ನೀವು ಮಾತನಾಡಬೇಡಿ ಎಂದಿದ್ದಾರೆ. ಇದಕ್ಕೆ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ.

ನೀವು ಈಗ ಯಾಕೆ ಬಂದಿದ್ದು, ನಾಡಿದ್ದು ಕೊಲೆಗಾರರಿಗೆ ಜಾಮೀನು ಹಾಕುವುದು ನೀವೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿ ದ್ದಂತೆಯೇ ಕಾಂಗ್ರೆಸ್‌ ಮುಖಂಡರು ಸ್ಥಳದಿಂದ ತೆರಳಿದ್ದಾರೆ. ಮನೆಯಿಂದ ಹಿಂದಿರುಗುವ ವೇಳೆಯಲ್ಲಿ ಸಂಬಂಧಿಕರು ಕಾಂಗ್ರೆಸ್‌ ಮುಖಂಡರಿಗೆ ಧಿಕ್ಕಾರ ಕೂಗಿದ್ದಾರೆ.

ಪ್ರವೀಣ್‌ ಹತ್ಯೆ ಪ್ರಕರಣ : ಪುತ್ತೂರಿಗೆ ಎನ್‌ಐಎ ತಂಡ

ಕೇಂದ್ರ ಸಚಿವ ಅಮಿತ್‌ ಶಾ ಅವರ ಸೂಚನೆಯ ಮೇರೆಗೆ ಎನ್‌ಐಎ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಆರಂಭಿಸಿದೆ. ಪ್ರಕರಣದ ಕುರಿತು ಎಫ್‌ ಐಆರ್‌ ದಾಖಲು ಮಾಡುವ ಮೊದಲೇ ಎನ್‌ಐಎ ಆರು ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿದ್ದು, ಬೆಳ್ಳಾರೆ ಪೊಲೀಸರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ ಸೋನಾವಣೆ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.

ಘಟನೆ ನಡೆದಿರುವ ಸ್ಥಳದಲ್ಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆಯನ್ನು ನಡೆಸಲಿರುವ ಎನ್‌ಐಎ ತಂಡ ಎಫ್ಐಆರ್‌ ದಾಖಲು ಮಾಡಿಕೊಂಡು ತನಿಖೆಯನ್ನು ಆರಂಭಿಸಲಿದೆ. ಇನ್ನು ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಇಬ್ಬರು ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಕೇರಳದಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸರು ಈ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನೂ ನೀಡಿಲ್ಲ. ಇನ್ನೊಂದೆಡೆಯಲ್ಲಿ ಆರೋಪಿಗಳಿಗಾಗಿ ಕರ್ನಾಟಕ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ.

ಇದೀಗ ಎನ್‌ಐಎ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿದ್ದು ಸುಳ್ಯ, ಪುತ್ತೂರು, ಬೆಳ್ಳಾರೆ ಭಾಗಗಳಲ್ಲಿ ತನಿಖೆಯನ್ನು ನಡೆಸಲಿದೆ. ಅಲ್ಲದೇ ಪ್ರವೀಣ್‌ ಹತ್ಯೆ ಪ್ರಕರಣದ ತನಿಖೆ ಇನ್ನಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : Fazil murder case : ಫಾಜಿಲ್‌ ಹತ್ಯೆ ಪ್ರಕರಣ, ಉಡುಪಿಯಲ್ಲಿ ಅಪರಿಚಿತ ಕಾರು ಪತ್ತೆ

ಇದನ್ನೂ ಓದಿ : Praveen Nettaru Murder NIA Investigation : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಪುತ್ತೂರಿಗೆ ಎನ್‌ಐಎ ಅಧಿಕಾರಿಗಳ ತಂಡ

Congress leader’s visit to Praveen Nettaru house, relatives shouted contempt

Comments are closed.