KS Eshwarappa : ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್​ ಬಿಗಿಪಟ್ಟು:ನಾಳೆ ಅಹೋರಾತ್ರಿ ಧರಣಿ

ಬೆಂಗಳೂರು :KS Eshwarappa: ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್​ ಪಾಲಿಗೆ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕಾಂಗ್ರೆಸ್​ ನಾಯಕರು ಪೊಲೀಸರಿಂದ ಬಂಧನಕ್ಕೊಳಗಾದರು.


ಪೊಲೀಸರಿಂದ ವಶಕ್ಕೊಳಪಟ್ಟು ಹೊರಬಂದ ಡಿ.ಕೆ ಶಿವಕುಮಾರ್​ ನಾಳೆ ಸಚಿವ ಕೆ.ಎಸ್​ ಈಶ್ವರಪ್ಪರನ್ನು ಬಂಧಿಸುವಂತೆ ಆಗ್ರಹಿಸಿ ಹೈಕೋರ್ಟ್ ಹಾಗೂ ವಿಧಾನಸೌಧದ ಎದುರು ನಾನು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 24 ಗಂಟೆಗಳ ಅಹೋರಾತ್ರಿ ಧರಣಿ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ನಾಳೆ ಡಿ.ಕೆಶಿವಕುಮಾರ್​ ಹಾಗೂ ಸಿದ್ದರಾಮಯ್ಯರ ಧರಣಿಯ ನಿಮಿತ್ತ ಜಿಲ್ಲಾವಾರು ಪ್ರತಿಭಟನೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ.


ಇನ್ನು ಈ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಸಂತೋಷ್​ ಪಾಟೀಲ್​ ಆತ್ಮಹತ್ಯೆಗೆ ಕೆ.ಎಸ್ ಈಶ್ವರಪ್ಪ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಪೊಲೀಸರು ಅವರನ್ನು ಬಂಧಿಸುವಂತೆ ಆಗ್ರಹಿಸಿ ನಾಳೆ ನಾನು ಹಾಗೂ ಸಿದ್ದರಾಮಯ್ಯ ವಿಧಾನಸೌಧ ಹಾಗೂ ಹೈಕೋರ್ಟ್ ಎದುರು ಅಹೋರಾತ್ರಿ ಧರಣಿ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.


ಇತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಇದೇ ವಿಚಾರವಾಗಿ ಮಾತನಾಡಿದ್ದು ಇಂದು ಡಾ. ಬಿ.ಆರ್​ ಅಂಬೇಡ್ಕರ್​ರ ಜನ್ಮದಿನ. ಬಿ. ಆರ್​ ಅಂಬೇಡ್ಕರ್​ ದೇಶಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ನೀಡಿದ್ದಾರೆ. ಈ ಸಂವಿಧಾನವನ್ನು ಬಿಜೆಪಿ ನಾಯಕರು ಪಾಲಿಸಬೇಕಿದೆ ಎಂದು ಹೇಳಿದರು.

ಇದನ್ನು ಓದಿ : siddaramaiah dk shivakumar : ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಡಿಕೆಶಿ, ಸಿದ್ದರಾಮಯ್ಯ ಖಾಕಿ ವಶಕ್ಕೆ

ಇದನ್ನೂ ಓದಿ : KS Eshwarappa vs KJ George : ನನ್ನ ಹಾಗೇ ಈಶ್ವರಪ್ಪನೂ ರಾಜೀನಾಮೆ ನೀಡಲಿ : ಮಾಜಿ ಸಚಿವ ಕೆ.ಜೆ.ಜಾರ್ಜ್ ಆಗ್ರಹ

Congress protests tomorrow demanding the arrest of KS Eshwarappa

Comments are closed.