ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ಈಗಾಗಲೇ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಕೊರೊನಾ ಸೋಂಕು ಹೆಚ್ಚಾದರೆ ನಮಗೆ ಬೇರೆ ಮಾರ್ಗಗಳು ತೋಚುವುದಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದಿದ್ದಾರೆ.
ಕೊರೊನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡಬೇಕಾಗಿದೆ. ಅಷ್ಟೇ ಅಲ್ಲಾ ರಾಜ್ಯದಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಜಾರಿ ಮಾಡುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.