D.K.Shivkumar: ಡಿಕೆಶಿಗೆ ಬಿಗ್ ರಿಲೀಫ್: ತನಿಖೆ ಕೈಬಿಡುವಂತೆ ಇ.ಡಿಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

ಬೆಂಗಳೂರು: D.K.Shivkumar: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆಶಿ ಮನವಿ ಮೇರೆಗೆ ತನಿಖೆ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಕೈಬಿಡುವಂತೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಹೈಕೋರ್ಟ್‍ಗೆ ಮನವಿಯನ್ನು ಸಲ್ಲಿಸಿದ್ದರು. ಆ ಮನವಿಯನ್ನು ಪರಿಗಣಿಸಿರುವ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಯಕ(ಇ.ಡಿ)ಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್ ಕುಮಾರ್ ರೈ

ಡಿ.ಕೆ.ಶಿವಕುಮಾರ್ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ಡಿಕೆಶಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಆದರೆ ಡಿಕೆಶಿ ಅವರು ತನಿಖೆಯಿಂದ ವಿನಾಯಿತಿ ನೀಡುವಂತೆ ಮನವಿಯನ್ನು ಮಾಡಿದ್ದರೂ ಅದನ್ನು ಜಾರಿ ನಿರ್ದೇಶನಾಲಯ ತಿರಸ್ಕರಿಸಿತ್ತು. ಈ ಹಿನ್ನೆಲೆ ಕಳೆದ ತಿಂಗಳು ಡಿಕೆಶಿ ಅವರು ಇ.ಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಒಡೆತನದ ಪತ್ರಿಕೆಯಾಗಿದ್ದು, ಈ ಪತ್ರಿಕೆ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆಯ ಬಗ್ಗೆ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ಈ ಹಿಂದೆ ಯಂಗ್ ಇಂಡಿಯನ್ ಗೆ ಅನಿರ್ದಿಷ್ಟ ಮೊತ್ತದ ಹಣವನ್ನು ದೇಣಿಗೆ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರುಗಳಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ. ಪವನ್ ಬನ್ಸಾಲ್ ಅವರನ್ನು ಕಳೆದ ಕೆಲ ತಿಂಗಳಿನಿಂದ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Digital Currency: ಭಾರತದಲ್ಲಿ ಪ್ರಾಯೋಗಿಕವಾಗಿ ಬಿಡುಗಡೆಯಾದ ಡಿಜಿಟಲ್‌ ರೂಪಾಯಿ; ಇದರಿಂದಾಗುವ ಲಾಭವೇನು…

ಈ ಹಿಂದೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿ.ಕೆ.ಶಿವಕುಮಾರ್ ಅವರು, ಕಾನೂನಿನ ಬಗ್ಗೆ ನನಗೆ ಗೌರವವಿದೆ, ವಿಚಾರಣೆಗೆ ಹಾಜರಾಗಲು ಇಡಿ ಬಳಿ ಸಮಯ ಕೋರಿದ್ದೆ. ಆದರೆ ಮನವಿ ತಿರಸ್ಕರಿಸಿದ್ದ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ತನಗೆ ಗೊತ್ತಿರುವ ವಿಚಾರಗಳನ್ನೆಲ್ಲಾ ಹೇಳಿದ್ದೇನೆ ಎಂದಿದ್ದರು.

D.K. Shivkumar: Big relief for DK: Delhi High Court has issued a notice to ED to drop the investigation

Comments are closed.