mlc election : ಬೆಂಗಳೂರು : ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 26ರಿಂದಲೇ ಅಧಿಸೂಚನೆ ಜಾರಿಗೆ ಬರಲಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿರುವ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಲಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದೆ. ಸೆಪ್ಟೆಂಬರ್ 26ರಿಂದಲೇ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3 ರಂದು ನಾಪಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 7 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.
ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲಿ ಕಾಲರಾ ಪತ್ತೆ : 11 ಮಂದಿಗೆ ದೃಢ, ಜಿಲ್ಲೆಯಲ್ಲಿ ಹೈಅಲರ್ಟ್
ಉಪಚುನಾವಣೆಯ ಮತದಾನ ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಅಕ್ಟೋಬರ್ 24ರಂದು ಮತಎಣಿಕೆ ಕಾರ್ಯ ನಡೆಯಲಿದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ಗಳಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಈ ಚುನಾವಣೆಯಲ್ಲಿ ಹಕ್ಕು ಚಲಾಯಿಸಬಹುದಾಗಿದೆ.
ಇದನ್ನೂ ಓದಿ : 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಸಿಗಲ್ಲ ಗೃಹಲಕ್ಷ್ಮೀ ಹಣ : ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ?
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಇದೀಗ ಉಪ ಚುನಾವಣೆ ನಡೆಯಲಿದೆ.
Dakshina Kannada Local Body mlc election Date fix , Karnataka Legislative Council