ನವೆಂಬರ್ ಕ್ರಾಂತಿ : ಯೂ ಟರ್ನ್ ಹೊಡೆದ್ರಾ ಡಿಸಿಎಂ ಡಿಕೆ ಶಿವಕುಮಾರ್ ?
ಬೆಂಗಳೂರು : ನವೆಂಬರ್ ಕ್ರಾಂತಿಗೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ನೀಡಿರುವ ಹೇಳಿಕೆ ಈಗ ಕುತೂಹಲಕ್ಕೆ ಕಾರಣವಾಗಿದ್ದು, ಯಾವ ಕ್ರಾಂತಿಯೂ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. .ಈ ಮೂಲಕ ಅಧಿಕಾರ ಹಸ್ತಾಂತರ ಪೊಲಿಟಿಕ್ಸ್ ನಲ್ಲಿ ಅವರು ಮತ್ತೆ ಒಂದು ಹೆಜ್ಜೆ ಹಿಂದೆ ಸರಿದರೇ ? ಎಂಬ ಪ್ರಶ್ನೆ ಉದ್ಭವವಾಗಿದೆ.
ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಆಗುವುದಿಲ್ಲ. ಡಿಸೆಂಬರ್, ಜನವರಿ, ಫೆಬ್ರವರಿ ಕ್ರಾಂತಿಯೂ ಇಲ್ಲ. ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಆಕಾಂಕ್ಷೆಗಳು ಇರುವುದು ಸಹಜ. ಆಕಾಂಕ್ಷಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಏನು ಹೇಳಬೇಕೋ ಹೇಳುತ್ತದೆ ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ಇದೇ ತಿಂಗಳು ಸಿಎಂ ಸಿದ್ದರಾಮಯ್ಯ ಕೂಡಾ ದೆಹಲಿಗೆ ಭೇಟಿ ನೀಡಲಿದ್ದು, ಶಿವಕುಮಾರ್ ಹೇಳಿಕೆಯ ಹಿಂದಿನ ಅರ್ಥ ಹುಡುಕುವುದು ಸವಾಲಾಗಿ ಪರಿಣಮಿಸಿದೆ.
ಇದನ್ನೂ ಓದಿ: ಆರ್ ಎಸ್ ಎಸ್ ನಿರ್ಬಂಧ : ಕಾಂಗ್ರೆಸ್ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಬಂದ್ರು ಮೋಹನ್ ಭಾಗವತ್



