Declaration of Congress guarantee : 200 ಯೂನಿಟ್‌ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಯಜಮಾನಿಗೆ 2 ಸಾವಿರ ರೂ. : ಕಾಂಗ್ರೆಸ್‌ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರಕಾರ ಚುನಾವಣೆಯ ಹೊತ್ತಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು (Declaration of Congress guarantee) ಜಾರಿಗೆ ತಂದಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಿದೆ. ಮನೆಯ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ, ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರಿಗೆ ಪ್ರಯಾಣ, ನಿರುದ್ಯೋಗಿಗಳಿಗೆ ತಿಂಗಳಿಗೆ 3 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಈ ವೇಳೆಯಲ್ಲಿ ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜೊತೆಗೆ ಹಲವು ಬಹುತೇಕ ಯೋಜನೆಗಳು ಅಗಸ್ಟ್‌ 15 ರಿಂದಲೇ ಜಾರಿಗೆ ತರಲಿದ್ದೇವೆ ಎಂದು ಘೋಷಿಸಿದ್ದಾರೆ.

ಎಲ್ಲರಿಗೂ 200 ಯೂನಿಟ್‌ ವಿದ್ಯುತ್‌ :

ರಾಜ್ಯ ಸರಕಾರ ಗೃಹ ಜ್ಯೋತಿ ಯೋಜನೆಯನ್ನು ಘೋಷಣೆ ಮಾಡಿದೆ. ಎಲ್ಲರೂ ಕೂಡ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಎಲ್ಲರೂ 200 ಯೂನಿಟ್‌ ವರೆಗೆ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತದೆ. 200 ಯೂನಿಟ್‌ ವರೆಗೆ ಯಾರೂ ಕೂಡ ಬಿಲ್‌ ಪಾವತಿ ಮಾಡಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರವೇ ಬಿಲ್‌ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣ ಮಾಡಿದ್ದಾರೆ.

ಬಿಪಿಎಲ್‌, ಎಪಿಎಲ್‌ ಮನೆ ಯಜಮಾನಿಗೆ 2 ಸಾವಿರ ರೂಪಾಯಿ

ಇನ್ನು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಹಣವನ್ನು ಪ್ರತೀ ತಿಂಗಳು ಜಮೆ ಮಾಡಲಾಗುತ್ತದೆ. ಜೂನ್‌ 15ರಿಂದ ಜುಲೈ 15 ರ ಒಳಗಾಗಿ ಮನೆಯ ಯಜಮಾನಿಯು ಅರ್ಜಿಯನ್ನು ಆನ್‌ಲೈನ್‌ ಮೂಲಕ ಸಲ್ಲಿಕೆ ಮಾಡಬೇಕಾಗಿದೆ. ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡುದಾರರಿಗೂ ಈ ಯೋಜನೆ ಲಾಭ ದೊರೆಯಲಿದೆ. ಮನೆಯ ಯಜಮಾನಿಯು ಕಡ್ಡಾಯವಾಗಿ ಆಧಾರ್‌ ಕಾರ್ಡ್‌, ಬ್ಯಾಂಕ್‌ ಅಕೌಂಟ್‌ ಪಾಸ್‌ಬುಲ್‌ ಜೆರಾಕ್ಸ್‌ ಪ್ರತಿಯನ್ನು ನೀಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮನೆಯ ಯಜಮಾನಿಯ ಖಾತೆಗೆ ಹಣ ನೇರವಾಗಿ ಜಮೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಜುಲೈ 1 ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ

ಅನ್ನಭಾಗ್ಯ ಯೋಜನೆಯಡಿಯಲ್ಲಿ ತಲಾ 10 ಕೆಜಿ ಆಹಾರ ಧಾನ್ಯ ಪೂರೈಕೆ ಮಾಡುತ್ತೇವೆ. ಈ ಯೋಜನೆ ಜುಲೈ 1 ರಿಂದಲೇ ಜಾರಿಗೆ ಬರಲಿದೆ. ಬಿಪಿಎಲ್‌ ಕಾರ್ಡುದಾರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಅಂತ್ಯೋದಯ ಕಾರ್ಡುದಾರರಿಗೂ ಕೂಡ ತಲಾ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಲಾಗಿದೆ.

ಜೂಲ್‌ 11 ರಿಂದ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಶಕ್ತಿಯೋಜನೆಯನ್ನು ಕೂಡ ಘೋಷಣೆ ಮಾಡಲಾಗಿದ್ದು, ಈ ಯೋಜನೆಯ ಮೂಲಕ ಮಹಿಳೆಯರು ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ಎಸಿ ಮತ್ತು ಲಕ್ಸುರಿ ಬಸ್ಸುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಸ್ಸುಗಳಲ್ಲಿ ಸಂಚಾರ ಮಾಡಬಹುದಾಗಿದೆ. ಇದೇ ಯೋಜನೆಯನ್ನು ವಿದ್ಯಾರ್ಥಿಗಳಿಗೂ ಕೂಡ ವಿಸ್ತರಣೆ ಮಾಡಲಾಗಿದೆ. ಈ ಯೋಜನೆಯನ್ನು ಜೂನ್‌ 10ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಜೂನ್‌ 11ರಿಂದ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಉಚಿತವಾಗಿ ಸಂಚಾರ ಮಾಡಬಹುದಾಗಿದೆ.

ಇದನ್ನೂ ಓದಿ : Congress 5 Guarantee: 5 ಗ್ಯಾರಂಟಿ ಯೋಜನೆ ಜಾರಿ, ಆದಾಯಕ್ಕಾಗಿ ಕಾಂಗ್ರೆಸ್‌ ಹುಡುಕಾಟ

ಯುವನಿಧಿ ಯೋಜನೆ, ಪದವೀಧರರಿಗೆ 3 ಸಾವಿರ, ಡಿಪ್ಲೋಮಾದವರಿಗೆ 2 ಸಾವಿರ
ಯುವನಿಧಿ ಯೋಜನೆಯನ್ನೂ ಕೂಡ ಜಾರಿ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ವ್ಯಾಸಾಂಗ ಮಾಡಿ ಪಾಸ್‌ ಆಗಿ ನೋಂದಣಿ ಮಾಡಿಕೊಂಡವರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಪದವೀಧರರು 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಆದವರು 1,500 ರೂಪಾಯಿ ಸಹಾಯಧನವನ್ನು 24 ತಿಂಗಳ ಕಾಲ ಪಡೆಯಬಹುದಾಗಿದೆ. ಯಾರಾದ್ರೂ ಸರಕಾರಿ ಮತ್ತು ಖಾಸಗಿ ಕಂಪೆನಿಗಳಿಗೆ ಕೆಲಸಕ್ಕೆ ಸೇರ್ಪಡೆಯಾದ್ರೆ ಅವರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಯೋಜನೆಯ ಲಾಭ ಪಡೆದುಕೊಳ್ಳುವವರು ತಾವು ನಿರುದ್ಯೋಗಿಗಳು ಎಂದು ಘೋಷಣೆ ಮಾಡಿಕೊಂಡಬೇಕು. ಅಲ್ಲದೇ ಈ ಯೋಜನೆಗೆ ಅರ್ಜಯನ್ನು ಸಲ್ಲಿಸುವುದು ಕಡ್ಡಾಯವಾಗಿದ ಎಂದು ಸಿಎಂ ಘೋಷಿಸಿದ್ದಾರೆ.

Declaration of Congress guarantee: 200 units of free electricity, free bus travel for women, 2 thousand rupees for employers. : CM Siddaramaiah announced Congress guarantee

Comments are closed.