ಬೆಂಗಳೂರು : ರಾಜ್ಯದಾದ್ಯಂತ ಜೂನ್ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ (Declaration of Congress guarantee) ಪ್ರಯಾಣಿಸಬಹುದಾಗಿದೆ. ರಾಜ್ಯದಾದ್ಯಂತ ಮಹಿಳೆಯರು ಲಕ್ಸುರಿ ಹಾಗೂ ಎಸಿ ಬಸ್ಸುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಬಸ್ಸುಗಳಲ್ಲಿಯೂ ಉಚಿತವಾಗಿಯೇ ಪ್ರಯಾಣಿಸಬಹುದಾಗಿದೆ. ಅಲ್ಲದೇ ಸರಕಾರಿ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಕೂಡ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಈ ಯೋಜನೆ ಜೂನ್ 10 ರಂದು ಉದ್ಘಾಟನೆಗೊಳ್ಳಲಿದ್ದು, ಜೂನ್ 11 ರಿಂದಲೇ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಎಲ್ಲರಿಗೂ 200 ಯೂನಿಟ್ ವಿದ್ಯುತ್ :
ರಾಜ್ಯ ಸರಕಾರ ಗೃಹ ಜ್ಯೋತಿ ಯೋಜನೆಯನ್ನು ಘೋಷಣೆ ಮಾಡಿದೆ. ಎಲ್ಲರೂ ಕೂಡ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಎಲ್ಲರೂ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. 200 ಯೂನಿಟ್ ವರೆಗೆ ಯಾರೂ ಕೂಡ ಬಿಲ್ ಪಾವತಿ ಮಾಡಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರವೇ ಬಿಲ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣ ಮಾಡಿದ್ದಾರೆ.
ಬಿಪಿಎಲ್, ಎಪಿಎಲ್ ಮನೆ ಯಜಮಾನಿಗೆ 2 ಸಾವಿರ ರೂಪಾಯಿ
ಇನ್ನು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಹಣವನ್ನು ಪ್ರತೀ ತಿಂಗಳು ಜಮೆ ಮಾಡಲಾಗುತ್ತದೆ. ಜೂನ್ 15ರಿಂದ ಜುಲೈ 15 ರ ಒಳಗಾಗಿ ಮನೆಯ ಯಜಮಾನಿಯು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಬೇಕಾಗಿದೆ. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರಿಗೂ ಈ ಯೋಜನೆ ಲಾಭ ದೊರೆಯಲಿದೆ. ಮನೆಯ ಯಜಮಾನಿಯು ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್‌ಬುಲ್ ಜೆರಾಕ್ಸ್ ಪ್ರತಿಯನ್ನು ನೀಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮನೆಯ ಯಜಮಾನಿಯ ಖಾತೆಗೆ ಹಣ ನೇರವಾಗಿ ಜಮೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಜುಲೈ 1 ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ
ಅನ್ನಭಾಗ್ಯ ಯೋಜನೆಯಡಿಯಲ್ಲಿ ತಲಾ 10 ಕೆಜಿ ಆಹಾರ ಧಾನ್ಯ ಪೂರೈಕೆ ಮಾಡುತ್ತೇವೆ. ಈ ಯೋಜನೆ ಜುಲೈ 1 ರಿಂದಲೇ ಜಾರಿಗೆ ಬರಲಿದೆ. ಬಿಪಿಎಲ್ ಕಾರ್ಡುದಾರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಅಂತ್ಯೋದಯ ಕಾರ್ಡುದಾರರಿಗೂ ಕೂಡ ತಲಾ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಲಾಗಿದೆ.
ಯುವನಿಧಿ ಯೋಜನೆ, ಪದವೀಧರರಿಗೆ ೩ ಸಾವಿರ, ಡಿಪ್ಲೋಮಾದವರಿಗೆ 2 ಸಾವಿರ
ಯುವನಿಧಿ ಯೋಜನೆಯನ್ನೂ ಕೂಡ ಜಾರಿ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ವ್ಯಾಸಾಂಗ ಮಾಡಿ ಪಾಸ್ ಆಗಿ ನೋಂದಣಿ ಮಾಡಿಕೊಂಡವರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಪದವೀಧರರು 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಆದವರು 1,500 ರೂಪಾಯಿ ಸಹಾಯಧನವನ್ನು 24 ತಿಂಗಳ ಕಾಲ ಪಡೆಯಬಹುದಾಗಿದೆ. ಯಾರಾದ್ರೂ ಸರಕಾರಿ ಮತ್ತು ಖಾಸಗಿ ಕಂಪೆನಿಗಳಿಗೆ ಕೆಲಸಕ್ಕೆ ಸೇರ್ಪಡೆಯಾದ್ರೆ ಅವರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಯೋಜನೆಯ ಲಾಭ ಪಡೆದುಕೊಳ್ಳುವವರು ತಾವು ನಿರುದ್ಯೋಗಿಗಳು ಎಂದು ಘೋಷಣೆ ಮಾಡಿಕೊಂಡಬೇಕು. ಅಲ್ಲದೇ ಈ ಯೋಜನೆಗೆ ಅರ್ಜಯನ್ನು ಸಲ್ಲಿಸುವುದು ಕಡ್ಡಾಯವಾಗಿದ ಎಂದು ಸಿಎಂ ಘೋಷಿಸಿದ್ದಾರೆ.
Declaration of Congress guarantee: Free travel for women in government buses from June 11: Applicable to government employed women too