ಬೆಂಗಳೂರು :summons to dk shivakumar : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ಐದು ದಿನಗಳ ಹಿಂದೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ ಬೆನ್ನಲ್ಲೇ ಇದೀಗ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಿ.ಕೆಶಿವಕುಮಾರ್ , ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ್ ಹಾಗೂ ರಾಜೇಂದ್ರಗೆ ಸಮನ್ಸ್ ಜಾರಿ ಮಾಡಿದೆ. ಐವರಿಗೂ ಜುಲೈ 1ರಂದು ಕೋರ್ಟ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಕೋರ್ಟ್ನ ನ್ಯಾಯಮೂರ್ತಿ ವಿಕಾಸ್ ದುಲ್ ನೇತೃತ್ವದ ಪೀಠವು ಮೇ 28ರಂದು ವಿಚಾರಣೆ ನಡೆಸಿತ್ತು. ಇದಾದ ಬಳಿಕ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಬೇಸಿಗೆ ರಜೆ ಬಳಿಕ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಬೇಕೆಂದು ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಐವರಿಗೆ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ 2019ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಈ ಪ್ರಕರಣದಲ್ಲಿ ಎಂಟ್ರಿ ನೀಡಿತ್ತು. ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದ ಡಿ.ಕೆ ಶಿವಕುಮಾರ್ ಸದ್ಯ ಜಾಮೀನಿನ ಮೂಲಕ ಹೊರಗಿದ್ದಾರೆ. ಇದೀಗ ಇದೇ ಪ್ರಕರಣದ ಮುಂದುವರಿದ ಭಾಗವಾಗಿ ಡಿ.ಕೆ ಶಿವಕುಮಾರ್ ಮತ್ತವರ ಆಪ್ತರಿಗೆ ಸಮನ್ಸ್ ನೀಡಲಾಗಿದೆ .
ಇದನ್ನು ಓದಿ : yenapoya collage at mangaluru : ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜ್ಯೂನಿಯರ್ಸ್ -ಸೀನಿಯರ್ಸ್ ಗಲಾಟೆ : 8 ಮಂದಿ ವಿದ್ಯಾರ್ಥಿಗಳ ಬಂಧನ
ಇದನ್ನೂ ಓದಿ : Glucose Mixed With Red Medicine : ರಕ್ತದ ಬದಲು ರೋಗಿಯ ದೇಹಕ್ಕೆ ಗ್ಲುಕೋಸ್ ಹಾಕಿದ ಆಸ್ಪತ್ರೆ ಸಿಬ್ಬಂದಿ
delhi ed court given a summons to dk shivakumar in illegal money transfers case