congress leader mallikarjuna kharge : ಇಡಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ

congress leader mallikarjuna kharge : ಕಾಂಗ್ರೆಸ್​ ಹಿರಿಯ ಮುಖಂಡ ಹಾಗೂ ರಾಜ್ಯ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನ್ಯಾಷನಲ್​ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣದ ಅಡಿಯಲ್ಲಿ ದೆಹಲಿಯ ಜಾರಿ ನಿರ್ದೇಶನಾಲಯದ ಎದುರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.ಪ್ರಕರಣ ಸಂಬಂಧ ಇಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆಗೆ ನೋಟಿಸ್​ ನೀಡಲಾಗಿತ್ತು.


ನ್ಯಾಷನಲ್​ ಹೆರಾಲ್ಡ್​ ಭ್ರಷ್ಟಾಚಾರ ಪ್ರಕರಣವು ಕಾಂಗ್ರೆಸ್​ ನಾಯಕರ ಪಾಲಿಗೆ ಕಂಟಕ ಪ್ರಾಯವಾಗಿ ಪರಿಣಮಿಸಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಇನ್ನೂ ಅನೇಕರ ಹೆಸರು ಥಳುಕು ಹಾಕಿಕೊಂಡಿದೆ.


ಇದೇ ಪ್ರಕರಣದ ಸಂಬಂಧ ಇಂದು ಮಲ್ಲಿಕಾರ್ಜುನ ಖರ್ಗೆ ದೆಹಲಿಯ ಇಡಿ ಕಚೇರಿಗೆ ಭೇಟಿ ನೀಡಿದ್ದು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ ಎನ್ನಲಾಗಿದೆ.

Janardhan Reddy : ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಜನಾರ್ಧನ ರೆಡ್ಡಿ

ಹೊಸಪೇಟೆ : ಹಲವು ವರ್ಷಗಳಿಂದಲೂ ಸಕ್ರೀಯ ರಾಜಕಾರಣದಿಂದ ದೂರ ಉಳಿದಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy ) ಮತ್ತೆ ರಾಜಕೀಯ ಜೀವನ ಆರಂಭಿಸುವುದಾಗಿ ಘೋಷಣ ಮಾಡಿದ್ದಾರೆ. ರಾಜ್ಯದಲ್ಲಿ150 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲುವಂತೆ ಮಾಡುವುದು ನನ್ನ ಗುರಿ. ಇದಕ್ಕೆ ಬೇಕಾದ ಕಾರ್ಯತಂತ್ರ ರೂಪಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

ಹೊಸಪೇಟೆಯ ಹರಪನಹಳ್ಳಿಯಲ್ಲಿನ ಎಚ್‌.ಪಿ.ಎಸ್.‌ ಕಾಲೇಜಿನ ಮೈದಾನದಲ್ಲಿ ಆಯೋಜಿಸಿದ್ದ ಸೀತಾರಾಮ ಕಲ್ಯಾಣೋತ್ಸವ ಹಾಗೂ ಕರುಣಾಕರ ರೆಡ್ಡಿ ಅವರ ಷಷ್ಠ್ಯಾಬ್ಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳ್ಳಾರಿಯನ್ನು ಮತ್ತೆ ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡುತ್ತೇವೆ. ಪ್ರತೀ ಹಳ್ಳಿಗೂ ನಾನು ಹಾಗೂ ಕರುಣಾಕರ ರೆಡ್ಡಿ ಬರುತ್ತೇವೆ ಎನ್ನುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ಕೊಟ್ಟಿದ್ದಾರೆ ಮಾಜಿ ಸಚಿವ ಜನಾರ್ಧನ ರೆಡ್ಡಿ.

ಗಣಿ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ ಜನಾರ್ಧನ ರೆಡ್ಡಿ ಹಲವು ವರ್ಷಗಳಿಂದಲೂ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ಕೂಡ ಅವರನ್ನು ದೂರ ಇಟ್ಟುಕೊಂಡೇ ರಾಜಕಾರಣವನ್ನು ನಡೆಸುತ್ತಾ ಬಂದಿತ್ತು. ಆದರೆ ಜನಾರ್ಧನ ರೆಡ್ಡಿ ಅವರು ಜಾಮೀನಿನ ಮೇಲೆ ಹೊರಬಂದು ಅವರ ಮೇಲಿರುವ ನಿರ್ಬಂಧಗಳು ಕಡಿಮೆಯಾಗುತ್ತಲೇ ಪಕ್ಷದ ಜೊತೆಗೆ ಗುರುತಿಸಿಕೊಳ್ಳಲು ಶುರು ಮಾಡಿದ್ದರು. ಜನಾರ್ಧನ ರೆಡ್ಡಿ ಸಂಘ ಪರಿವಾರದ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ದೆಹಲಿ ಮಟ್ಟದಲ್ಲಿಯೇ ಪಕ್ಷಕ್ಕೆ ಬರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ : gang rape on girl child : 16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್​ ರೇಪ್​​: ಆರೋಪಿಗಳ ಬಂಧನ

ಇದನ್ನೂ ಓದಿ : Yogi Adityanath : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಕಚೇರಿಯ ಟ್ವಿಟರ್ ಖಾತೆ ಹ್ಯಾಕ್

ed is questioning senior congress leader mallikarjuna kharge in connection with the national herald corruption case

Comments are closed.