Election Results 2026: ತಮಿಳುನಾಡಿನಲ್ಲಿ TVK ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ

ತಮಿಳುನಾಡಿನಲ್ಲಿ ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿವೆ.

Election Results 2026: 2026ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಮುಂದುವರಿಯುತ್ತಿದ್ದು, ಪ್ರಮುಖ ರಾಜ್ಯಗಳಲ್ಲಿ ರಾಜಕೀಯ ಚಿತ್ರಣ ಬದಲಾಗುತ್ತಿದೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿವೆ.

ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟುವತ್ತ ಬಿಜೆಪಿ:

294 ಕ್ಷೇತ್ರಗಳ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆರಂಭಿಕ ಟ್ರೆಂಡ್ಗಳಲ್ಲಿ ಬಹುಮತದ ಗಡಿಯನ್ನು ದಾಟಿದೆ. ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ತೀವ್ರ ಹಿನ್ನಡೆ ಅನುಭವಿಸುತ್ತಿದೆ.

ಬಿಜೆಪಿ: 196

ತೃಣಮೂಲ ಕಾಂಗ್ರೆಸ್: 96

ಕಾಂಗ್ರೆಸ್: 00

ಇತರರು: 01

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ವಕ್ಷೇತ್ರ ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಹಿನ್ನಡೆ ಅನುಭವಿಸುತ್ತಿದ್ದಾರೆ.

ತಮಿಳುನಾಡು: ನಟ ವಿಜಯ್ ಪಕ್ಷದ ಸಂಚಲನ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಒಟ್ಟಾರೆಯಾಗಿ ಮುನ್ನಡೆಯಲ್ಲಿದ್ದರೂ, ನಟ ವಿಜಯ್ ಅವರ TVK ಪಕ್ಷ ಎಲ್ಲರ ಗಮನ ಸೆಳೆದಿದೆ. ಎಐಎಡಿಎಂಕೆ (AIADMK) ಹಿಂದಿಕ್ಕುವ ಮೂಲಕ ಡಿಎಂಕೆಗೆ ಪ್ರಬಲ ಪೈಪೋಟಿ ನೀಡುತ್ತಿದೆ.

ತಮಿಳಗ ವೆಟ್ರಿ ಕಳಗಂ (TVK): 113

ಎಐಎಡಿಎಂಕೆ: 71

ಡಿಎಂಕೆ: 50

ಇತರ ರಾಜ್ಯಗಳ ಸ್ಥಿತಿಗತಿ:

ಅಸ್ಸಾಂನಲ್ಲಿ  ಎನ್ಡಿಎ (NDA) ಮೈತ್ರಿಕೂಟ ಪ್ರಬಲ ಪ್ರದರ್ಶನ ನೀಡುತ್ತಿದ್ದು, ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದತ್ತ ಮುನ್ನಗ್ಗುತ್ತಿದೆ. ಸುಮಾರು 43ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈ ಬಾರಿ ಕೇರಳದಲ್ಲಿ ಆಡಳಿತ ಬದಲಾವಣೆಯ ಲಕ್ಷಣಗಳು ಕಾಣಿಸುತ್ತಿವೆ. ಆಡಳಿತಾರೂಢ ಎಲ್ಡಿಎಫ್ (LDF) ವಿರುದ್ಧ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮುನ್ನಡೆ ಸಾಧಿಸಿದೆ.

ಪುದುಚೇರಿಯಲ್ಲಿ ಎಐಎನ್ಆರ್ಸಿ (AINRC) ನೇತೃತ್ವದ ಎನ್ಡಿಎ ಮೈತ್ರಿಕೂಟವು ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಸಂಜೆ ವೇಳೆಗೆ ಇವಿಎಂ (EVM) ಮತ ಎಣಿಕೆ ಪೂರ್ಣಗೊಂಡ ನಂತರ ಅಂತಿಮ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

 

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories